ರಾಂಚಿ(ಜಾರ್ಖಂಡ್): ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬುಲೆನ್ಸ್ ಛತ್ರ ಜಿಲ್ಲೆಯ ಸಿಮಾರಿಯಾ ಬಳಿಯ ಕಾಡಿನಲ್ಲಿ ಪತನಗೊಂಡಿದ್ದು, ಅದರಲ್ಲಿದ್ದ 7 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಂಚಿ ವಿಮಾನ ನಿಲ್ದಾಣದಿಂದ ಸೋಮವಾರ ಸಂಜೆ 7.10ಕ್ಕೆ ಹೊರಟ ಏರ್ ಆಂಬುಲೆನ್ಸ್, ಟೇಕ್ ಆಫ್ ಆದ ಸುಮಾರು 20 ನಿಮಿಷಗಳ ನಂತರ ವಾಯು ಸಂಚಾರ ನಿಯಂತ್ರಣದೊಂದಿಗೆ ಸಂಪರ್ಕ ಕಳೆದುಕೊಂಡಿತ್ತು .

ರೋಗಿ, ಇಬ್ಬರು ಪೈಲಟ್ಗಳು ಸೇರಿದಂತೆ ಒಟ್ಟು ಏಳು ಜನರಿದ್ದ ಏರ್ ಆಂಬುಲೆನ್ಸ್ ಛತ್ರ ಜಿಲ್ಲೆಯ ಸಿಮಾರಿಯಾ ಬಳಿ ಅಪಘಾತಕ್ಕೀಡಾಗಿದೆ. ಘಟನೆಗೆ ಪ್ರತಿಕೂಲ ಹವಾಮಾನ ಕಾರಣವಿರಬಹುದು. ತನಿಖೆಯ ನಂತರವೇ ನಿಖರ ಕಾರಣ ತಿಳಿದುಬರಲಿದೆ ರಾಂಚಿ ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್ ತಿಳಿಸಿದ್ದಾರೆ.

‘ರಾಂಚಿ– ದೆಹಲಿ ವಲಯದಲ್ಲಿ ಏರ್ ಆಂಬುಲೆನ್ಸ್ ಆಗಿ ಕಾರ್ಯಾಚರಿಸುತ್ತಿದ್ದ ರೆಡ್ಬರ್ಡ್ ಏರ್ವೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ‘ಬೀಚ್ಕ್ರಾಫ್ಟ್ ಸಿ90’ ವಿಮಾನವು ಪತನಗೊಂಡಿದ್ದು, ಅದರಲ್ಲಿದ್ದ ಏಳು ಮಂದಿಯೂ ಮೃತಪಟ್ಟಿದ್ದಾರೆ ಎಂದು ಛತ್ರ ಜಿಲ್ಲಾಧಿಕಾರಿ ಕೀರ್ತಿಶ್ರೀ ಜಿ ಪಿಟಿಐಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.