ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ-ಟೊರೊಂಟೊ ಏರ್ ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ

Published 5 ಜೂನ್ 2024, 4:44 IST
Last Updated 5 ಜೂನ್ 2024, 4:44 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ-ಟೊರೊಂಟೊ ಏರ್ ಕೆನಡಾದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಬಂದ ಕಾರಣ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು.

ದೆಹಲಿ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (ಡಿಐಎಎಲ್) ಕಚೇರಿಗೆ ಮಂಗಳವಾರ ರಾತ್ರಿ 10.50ರ ವೇಳೆಗೆ ದೆಹಲಿ-ಟೊರೊಂಟೊ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಸಂದೇಶ ಬಂದಿತ್ತು. ಇದು ಹುಸಿ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಮಾನದಂಡದ ಅನುಸಾರವಾಗಿ ಸಂಪೂರ್ಣ ತಪಾಸಣೆ ನಡೆಸಲಾಯಿತು. ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT