ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌: ವಿಪರೀತ ತಾಪಮಾನ– ಮತಗಟ್ಟೆಗಳಲ್ಲಿ ಏರ್‌ ಕೂಲರ್‌, ಫ್ಯಾನ್‌

Published 10 ಏಪ್ರಿಲ್ 2024, 12:41 IST
Last Updated 10 ಏಪ್ರಿಲ್ 2024, 12:41 IST
ಅಕ್ಷರ ಗಾತ್ರ

ಚಂಡೀಗಢ: ಲೋಕಸಭೆ ಚುನಾವಣೆ ವೇಳೆಗೆ ಪಂಜಾಬ್‌ನಲ್ಲಿ ವಿಪರೀತ ತಾಪಮಾನ ಇರುವ ಮುನ್ಸೂಚನೆ ಇರುವುದರಿಂದ ಮತಗಟ್ಟೆಗಳಲ್ಲಿ ಏರ್‌ ಕೂಲರ್‌, ಫ್ಯಾನ್‌ ಅಳವಡಿಸಲಾಗುತ್ತದೆ.

ಅಲ್ಲದೇ ಮತದಾರರಿಗೆ ನೀರು, ತಂಪು ಪಾನೀಯ ಹಾಗೂ ಇತರ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಈ ಕುರಿತು ಜಿಲ್ಲಾಧಿಕಾರಿಗಳು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದಾರೆ ಎಂದು ಪಂಜಾಬ್‌ನ ಮುಖ್ಯ ಚುನಾವಣಾಧಿಕಾರಿ ಸಿಬಿನ್‌ ಸಿ. ಅವರು ಮಂಗಳವಾರ ಹೇಳಿದ್ದಾರೆ.

ಈ ವರ್ಷ ಪಂಜಾಬ್‌ನಲ್ಲಿ ಅಧಿಕ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮತದಾರರಿಗೆ ಕುಡಿಯುವ ನೀರು, ತಂಪು ಪಾನೀಯ ನೀಡಬೇಕು ಎಂದು ಚುನಾವಣಾ ಆಯೋಗವು ಕಳೆದ ತಿಂಗಳು ನಿರ್ದೇಶನ ನೀಡಿತ್ತು. ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಆದೇಶಿಸಿತ್ತು. 

ಜೂನ್‌ 1ರಂದು ಪಂಜಾಬ್‌ನಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT