ಮುಂಬೈ: ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು 241 ಜನರು ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ತಿಳಿಸಿದೆ.

ವಿಮಾನದಲ್ಲಿದ್ದ 242 ಜನರ ಪೈಕಿ 241 ಮಂದಿ ಸಾವನ್ನಪ್ಪಿದ್ದಾರೆ ಎಂದು ಗುರುವಾರ ತಡ ರಾತ್ರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಏರ್ ಇಂಡಿಯಾ ತಿಳಿಸಿದೆ.

ಈ ಅವಘಡವು ಗುರುವಾರ ಮಧ್ಯಾಹ್ನ 1.39ರ ಸುಮಾರಿಗೆ ಸಂಭವಿಸಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿ 242 ಮಂದಿಯನ್ನು ಹೊತ್ತ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಪತವಾಯಿತು ಎಂದು ಅದು ತಿಳಿಸಿದೆ.

ಭಾರತದ 169, ಬ್ರಿಟನ್ನ 53, ಪೋರ್ಚುಗಲ್ನ 7 ಹಾಗೂ ಕೆನಡಾದ ಒಬ್ಬ ವ್ಯಕ್ತಿ ಇದ್ದರು.

ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯೊಬ್ಬರು ಮಾತ್ರ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅದು ಹೇಳಿದೆ.
.ಅಹಮದಾಬಾದ್ನಲ್ಲಿ Air India ವಿಮಾನ ಪತನ: ದುರಂತ ಸ್ಥಳದ ವಿಡಿಯೊಗಳು ಇಲ್ಲಿವೆ.Breaking News: 200ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಅಹಮದಾಬಾದ್ನಲ್ಲಿ ಪತನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.