ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲಂಡನ್: ಏರ್ ಇಂಡಿಯಾದ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ಕಿರುಕುಳ, ಹಲ್ಲೆ

Published : 18 ಆಗಸ್ಟ್ 2024, 5:40 IST
Last Updated : 18 ಆಗಸ್ಟ್ 2024, 5:40 IST
ಫಾಲೋ ಮಾಡಿ
Comments

ನವದೆಹಲಿ/ಮುಂಬೈ: ಲಂಡನ್‌ನಲ್ಲಿ ಹೋಟೆಲ್‌ವೊಂದರಲ್ಲಿ ತಂಗಿದ್ದ ಏರ್ ಇಂಡಿಯಾದ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾನೆ.

ಈ ಬಗ್ಗೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ, ದೂರು ದಾಖಲಿಸಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಈ ವಾರದ ಆರಂಭದಲ್ಲಿ ಲಂಡನ್‌ನ ಹೋಟೆಲ್‌ವೊಂದರಲ್ಲಿ ನಮ್ಮ ಸಿಬ್ಬಂದಿ ಉಳಿದುಕೊಂಡಿದ್ದರು. ಹೋಟೆಲ್‌ ಭದ್ರತೆಯನ್ನು ಬೇಧಿಸಿ ವ್ಯಕ್ತಿಯೊಬ್ಬ ಒಳಗೆ ಪ್ರವೇಶ ಮಾಡಿ ನಮ್ಮ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಸಂಸ್ಥೆ ದೂರಿನಲ್ಲಿ ತಿಳಿಸಿದೆ.

ಆ ವ್ಯಕ್ತಿ ನಮ್ಮ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿದ್ದಂತೆ ಅವರು ಕೂಗಿಕೊಂಡಿದ್ದಾರೆ. ತಕ್ಷಣಕ್ಕೆ ಕೆಲವರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಹಾಗೂ ಆರೋಪಿಯನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ. 

ಇಲ್ಲಿನ ಹೀಥ್ರೂ ವಿಮಾನ ನಿಲ್ದಾಣದ ಬಳಿಯ ಸ್ಟಾರ್ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT