ನವದೆಹಲಿ: ಅಹಮದಾಬಾದ್ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬಿ.ಜೆ ಮೆಡಿಕಲ್ ಕಾಲೇಜಿನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಬಿ.ಜೆ. ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಸಂಘ (ಜೆಡಿಎ) ಖಚಿತಪಡಿಸಿದೆ.

2023ನೇ ಬ್ಯಾಚ್ನ ಜಯಪ್ರಕಾಶ್ ಚೌಧರಿ, ರಾಕೇಶ್ ದಿಹೋರಾ ಹಾಗೂ 2024ನೇ ಬ್ಯಾಚ್ನ ಆರ್ಯನ್ ರಜಪೂತ್, ಮಾನವ್ ಬಾದು ಎಂಬುವವರು ಮೃತಪಟ್ಟಿದ್ದಾರೆ. ಅವಘಡದಲ್ಲಿ ಇತರೆ 20 ಎಂಬಿಬಿಎಸ್ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆ ಪೈಕಿ 11 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜೆಡಿಎ ಪ್ರಕಟಣೆಯಲ್ಲಿ ತಿಳಿಸಿದೆ.

ವಿಮಾನ ದುರಂತದಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಮೃತಪಟ್ಟಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ರೀತಿಯ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ವೈದ್ಯರ ಸಂಘ ಮನವಿ ಮಾಡಿದೆ.

‘ಅತುಲ್ಯಂ’ ಕಟ್ಟಡದಲ್ಲಿ ವಾಸಿಸುತ್ತಿದ್ದ ಸೂಪರ್ ಸ್ಪೆಷಾಲಿಟಿ ವೈದ್ಯರ ಕುಟುಂಬದ ನಾಲ್ವರು ಸದಸ್ಯರು ಸಹ ಸಾವಿಗೀಡಾಗಿದ್ದಾರೆ ಎಂದು ವೈದ್ಯರ ಸಂಘ ವಿವರಿಸಿದೆ.

ಗುರುವಾರ ಮಧ್ಯಾಹ್ನ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಕನಿಷ್ಠ 270 ಮಂದಿ ಮೃತಪಟ್ಟಿದ್ದರು.
.Air India Plane Crash: ಕೋಲಾರದ ಮೆಡಿಕಲ್ ಕಾಲೇಜಲ್ಲಿ ಓದಿದ್ದ ಪ್ರತೀಕ್.Ahmedabad plane crash: ಘಟನಾ ಸ್ಥಳದಲ್ಲಿ ರಾಷ್ಟ್ರೀಯ ಭದ್ರತಾ ಪಡೆ ನಿಯೋಜನೆ.Ahmedabad Plane Crash| ಮೃತರ ಸಂಖ್ಯೆ 279ಕ್ಕೆ ಏರಿಕೆ: ಪೊಲೀಸ್ ಮೂಲಗಳ ಮಾಹಿತಿ.Ahmedabad Plane Crash: ತನಿಖೆಗೆ ಕೇಂದ್ರ ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.