ನವದೆಹಲಿ: ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ವಿಮಾನವು ದೆಹಲಿ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿಯಾಗಿದೆ.

‘ವಿಮಾನವು ದೆಹಲಿ ನಿಲ್ದಾಣದ ಸನಿಹ ತಲುಪಿದಾಗ ಒಂದು ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಅಪಾಯದ ಸೂಚನೆ ಕಾಕ್ಪಿಟ್ ಸಿಬ್ಬಂದಿಗೆ ಲಭಿಸಿದೆ. ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದ್ದು, ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಘಟನೆ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ’ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಸುಮಾರು 160 ಪ್ರಯಾಣಿಕರಿದ್ದ A320 ವಿಮಾನವು ರಾತ್ರಿ 9.30ರ ವೇಳೆಗೆ ದೆಹಲಿಯಲ್ಲಿ ಲ್ಯಾಂಡ್ ಆಗಿದೆ. ಆದರೆ, ಎಂಜಿನ್‌ನಲ್ಲಿ ನಿಜವಾಗಿಯೂ ಬೆಂಕಿ ಹೊತ್ತಿಕೊಂಡಿತ್ತೇ ಎಂಬುದು ಇನ್ನಷ್ಟೇ ದೃಢಪಡಬೇಕಿದೆ.

ಮತ್ತೊಂದು ಅವಘಡ...

ಗುರುವಾರ ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ವಿಮಾನದ ಹಿಂಭಾಗ ರನ್‌ವೇಗೆ ಬಡಿದಿದ್ದು, ಭಾರಿ ಅವಘಡವೊಂದು ಕೂದಲೆಳೆ ಅಂತರದಲ್ಲಿ ತಪ್ಪಿತ್ತು.

ಏರ್ ಇಂಡಿಯಾದ AI2651 ವಿಮಾನದಲ್ಲಿ 181 ಪ್ರಯಾಣಿಕರು ಇದ್ದರು. ಲ್ಯಾಂಡಿಂಗ್ ವೇಳೆ ವಿಮಾನದ ಹಿಂಭಾಗ ಡಿಕ್ಕಿಯಾಗಿದ್ದು, ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.