ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆ: ಏರ್ ಇಂಡಿಯಾ ವಿಮಾನಗಳ ಹಾರಾಟ ರದ್ದು

Published 8 ಮೇ 2024, 4:48 IST
Last Updated 8 ಮೇ 2024, 4:48 IST
ಅಕ್ಷರ ಗಾತ್ರ

ನವದೆಹಲಿ: ಅಸಮರ್ಪಕ ನಿರ್ವಹಣೆಯನ್ನು ಖಂಡಿಸಿ ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ ಎಂದು ವರದಿಯಾಗಿದೆ.

ಕ್ಯಾಬಿನ್ ಸಿಬ್ಬಂದಿಯ ಕೊರತೆಯಿಂದಾಗಿ ವಿವಿಧ ದೇಶಗಳು ಸೇರಿದಂತೆ ಕೊಚ್ಚಿ, ಕ್ಯಾಲಿಕಟ್ ಮತ್ತು ಬೆಂಗಳೂರಿಗೆ ಇಂದು ಸಂಚರಿಸಬೇಕಿದ್ದ ಹಲವು ಏರ್ ಇಂಡಿಯಾ ವಿಮಾನಗಳ ಹಾರಾಟ ರದ್ದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕ್ಯಾಬಿನ್ ಸಿಬ್ಬಂದಿಯ ಒಂದು ವಿಭಾಗವು ಕೊನೆಯ ಕ್ಷಣದಲ್ಲಿ ಮುಷ್ಕರಕ್ಕೆ ಕರೆ ನೀಡಿರುವ ಕಾರಣ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ, ವಿಳಂಬಕ್ಕೂ ಕಾರಣವಾಗಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT