ತಿರುವನಂತಪುರಂ: ಇಲ್ಲಿಂದ ಶಾರ್ಜಾಗೆ 170 ಪ್ರಯಾಣಿಕರೊಂದಿಗೆ ಸೋಮವಾರ ಸಂಚಾರ ಆರಂಭಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಾಪಸಾಯಿತು.

ವಿಮಾನದಲ್ಲಿ ಆರು ಮಂದಿ ಸಿಬ್ಬಂದಿ ಇದ್ದರು. ತಾಂತ್ರಿಕ ದೋಷ ಕಾಣಿಸಿಕೊಂಡಿದ್ದನ್ನು ಗುರುತಿಸಿದ ಅವರು ವಿಮಾನ ವನ್ನು ಸರುಕ್ಷಿತವಾಗಿ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಇಳಿಸಿದರು. ನಂತರ ಪ್ರಯಾಣಿಕರಿಗೆ ಬೇರೆ ವಿಮಾನ ವ್ಯವಸ್ಥೆ ಮಾಡಿ ಕಳುಹಿಸಲಾಯಿತು ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್(ಎಐಇ) ವಕ್ತಾರರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ. ವಿಮಾನ ಟೇಕ್ ಆಫ್ ಆದ ಅರ್ಧ ಗಂಟೆಯೊಳಗೆ ಪೈಲಟ್‌ಗಳು ತಾಂತ್ರಿಕ ದೋಷವನ್ನು ಗುರುತಿಸಿದ್ದಾರೆ. ನಂತರ ತಕ್ಷಣ ವಿಮಾನವನ್ನು ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಇಳಿಸಲು ತೀರ್ಮಾನ ಕೈಗೊಂಡಿದ್ದಾರೆ ಎಂದು ಎಐಇ ವಕ್ತಾರರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.