ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸೆಂಬರ್ 30 ರಂದು ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ

ವಿಮಾನ ನಿಲ್ದಾಣದ ಉದ್ಘಾಟನಾ ಪ್ರಯುಕ್ತ ವಿಮಾನ ಹಾರಾಟ: ‘ಮರ್ಯಾದಾ ಪುರುಷೋತ್ತಮ ಶ್ರೀರಾಮ ವಿಮಾನ ನಿಲ್ದಾಣ’
Published 20 ಡಿಸೆಂಬರ್ 2023, 10:01 IST
Last Updated 20 ಡಿಸೆಂಬರ್ 2023, 10:01 IST
ಅಕ್ಷರ ಗಾತ್ರ

ನವದೆಹಲಿ: ಅಯೋಧ್ಯೆಯ ‘ಮರ್ಯಾದಾ ಪುರುಷೋತ್ತಮ ಶ್ರೀರಾಮ ವಿಮಾನ ನಿಲ್ದಾಣ’ಕ್ಕೆ ಉದ್ಘಾಟನಾ ವಿಮಾನದ ವೇಳಾಪಟ್ಟಿಯನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಬಿಡುಗಡೆ ಮಾಡಿದೆ.

ಡಿಸೆಂಬರ್ 30 ರಂದು ದೆಹಲಿಯಿಂದ ಅಯೋಧ್ಯೆಗೆ ಏರ್ ಇಂಡಿಯಾ IX 2789 ವಿಮಾನ ಹಾರಲಿದೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಅಂದು ಬೆಳಿಗ್ಗೆ 11ಕ್ಕೆ ದೆಹಲಿಯಿಂದ ಹೊರಡಲಿರುವ ವಿಮಾನ ಮಧ್ಯಾಹ್ನ 12:20 ಕ್ಕೆ ಅಯೋಧ್ಯೆ ತಲುಪಲಿದೆ. ಅಂದೇ 12:50 ಕ್ಕೆ ವಾಪಸ್ ಹೊರಟು ಮಧ್ಯಾಹ್ನ 2:10ಕ್ಕೆ ದೆಹಲಿ ತಲುಪಲಿದೆ ಎಂದು ತಿಳಿಸಿದೆ.

‘ಅಯೋಧ್ಯೆ ವಿಮಾನ ನಿಲ್ದಾಣದ ಉದ್ಘಾಟನಾ ಪ್ರಯುಕ್ತ ನಮ್ಮ ಏರ್ ಇಂಡಿಯಾ ವಿಮಾನವನ್ನು ಹಾರಿಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಜನವರಿ 16 ರಿಂದ ದೈನಂದಿನ ಕಾರ್ಯಾಚರಣೆ ಪ್ರಾರಂಭವಾಗುವುದನ್ನು ನಿರೀಕ್ಷಿಸಲಾಗಿದೆ’ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವ್ಯವಸ್ಥಾಪಕ ನಿರ್ದೇಶಕ ಅಲೋಕ್ ಸಿಂಗ್ ತಿಳಿಸಿದ್ದಾರೆ.

ಭಾರತೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿ ಪ್ರಾಧಿಕಾರ ₹ 350 ಕೋಟಿ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸುತ್ತಿದೆ. ಡಿಸೆಂಬರ್ 14 ರಂದು ಡಿಜಿಸಿಎ ಇಲ್ಲಿಂದ ವಿಮಾನಗಳ ಕಾರ್ಯಾಚರಣೆಗೆ ಅನುಮತಿ ನೀಡಿದೆ.

ಪ್ರಾಧಿಕಾರ ಇದೇ ಡಿಸೆಂಬರ್ ಅಂತ್ಯದ ವೇಳೆಗೆ ವಿಮಾನ ನಿಲ್ದಾಣವನ್ನು ‍ಪ್ರಧಾನಿ ಮೋದಿ ಅವರಿಂದ ಉದ್ಘಾಟಿಸುವ ಯೋಜನೆ ಹಾಕಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT