ನವದೆಹಲಿ: ಸಿಬ್ಬಂದಿ ನಿರ್ವಹಣೆ ಮತ್ತು ತರಬೇತಿಗೆ ಸಂಬಂಧಿಸಿದ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ಏರ್ ಇಂಡಿಯಾಗೆ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.

ಜೂನ್ 12ರಂದು ಗುಜರಾತ್ನ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ಗೆ ತೆರಳಲು ಏರ್ ಇಂಡಿಯಾ ವಿಮಾನ (ಬೋಯಿಂಗ್ 787 ಡ್ರೀಮ್ಲೈನರ್) ಟೇಕ್–ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘಾನಿನಗರದ ವೈದ್ಯಕೀಯ ಕಾಲೇಜಿನ ಸಂಕೀರ್ಣದಲ್ಲಿದ್ದ ಕಟ್ಟಡಕ್ಕೆ ಅಪ್ಪಳಿಸಿತ್ತು. ವಿಮಾನದಲ್ಲಿದ್ದ 241 ಪ್ರಯಾಣಿಕರು, ಸಿಬ್ಬಂದಿ ಹಾಗೂ ಘಟನಾ ಸ್ಥಳದಲ್ಲಿದ್ದ 19 ಮಂದಿ ಮೃತಪಟ್ಟಿದ್ದರು. ಪ್ರಯಾಣಿಕರೊಬ್ಬರು ಅಪಾಯದಿಂದ ಪಾರಾಗಿದ್ದರು.

ಈ ಘಟನೆ ಬೆನ್ನಲ್ಲೇ ಈ ವರ್ಷ ಮತ್ತು ಕಳೆದ ವರ್ಷ ಸಂಭವಿಸಿದ ಅಪಘಾತಗಳ ಕುರಿತು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ (ಡಿಜಿಸಿಎ) ಸ್ವಯಂ ವರದಿ ಸಲ್ಲಿಸಿತ್ತು.

ಏರ್ ಇಂಡಿಯಾ ವರದಿ ಕುರಿತು ಪ್ರತಿಕ್ರಿಯಿಸಿರುವ ಡಿಜಿಸಿಎ, ‘ಜುಲೈ 23ರಂದು ಏರ್ ಇಂಡಿಯಾಗೆ 4 ನೋಟಿಸ್ಗಳನ್ನು ನೀಡಲಾಗಿತ್ತು. ಆದರೆ, ಸುರಕ್ಷತಾ ಮಾನದಂಡಗಳನ್ನು ಪಾಲಿಸುವಲ್ಲಿ ಏರ್ ಇಂಡಿಯಾ ಪದೇ ಪದೇ ವಿಫಲವಾಗಿದೆ. ಹಾಗಾಗಿ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದೆ.

ಇದೀಗ ಹೊಸ ನೋಟಿಸ್ನ ಪ್ರಕಾರ ಏರ್ ಇಂಡಿಯಾ ಸಂಸ್ಥೆಯು ಪೈಲಟ್ಗಳಿಗೆ ಕಡ್ಡಾಯ ವಿಶ್ರಾಂತಿ ನೀಡದಿರುವುದು, ಸಿಮ್ಯುಲೇಟರ್ ತರಬೇತಿ ಅವಶ್ಯಕತೆಗಳನ್ನು ಪಾಲಿಸದಿರುವುದು, ತರಬೇತಿ ಕೊರತೆ, ಸಾಕಷ್ಟು ಕ್ಯಾಬಿನ್ ಸಿಬ್ಬಂದಿಯೊಂದಿಗೆ ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ಹಾರಾಟ ಸೇರಿದಂತೆ ಒಟ್ಟು 29 ನಿಯಮಗಳನ್ನು ಉಲ್ಲಂಘಿಸಿದೆ ಎಂದು ಡಿಜಿಸಿಎ ತಿಳಿಸಿದೆ.

ಈ ಹಿಂದೆಯೂ ಹಲವು ಬಾರಿ ನೋಟಿಸ್ ನೀಡಿದರೂ ಕೂಡ ಸಿಬ್ಬಂದಿಯ ನಿರ್ವಹಣೆ, ತರಬೇತಿಯಲ್ಲಿನ ವ್ಯವಸ್ಥಿತ ಲೋಪಗಳು ಬಗೆಹರಿಯದೆ ಉಳಿದಿವೆ ಎಂದು ಡಿಜಿಸಿಎ ಹೇಳಿದೆ. ಆದರೆ, ‘ನಮ್ಮ ಸಿಬ್ಬಂದಿ ಮತ್ತು ಪ್ರಯಾಣಿಕರ ಸುರಕ್ಷತೆಗೆ ನಾವು ಬದ್ಧರಾಗಿದ್ದೇವೆ’ ಎಂದು ಏರ್ ಇಂಡಿಯಾ ಸಮರ್ಥಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.