ಮುಂಬೈ: ಅಹಮದಾಬಾದ್ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ಕ್ಯಾಪ್ಟನ್ ಸುಮೀತ್ ಪುಷ್ಕರಾಜ್ ಸಭರ್ವಾಲ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಮುಂಬೈಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಭರ್ವಾಲ್ ಅವರ ಪಾರ್ಥಿವ ಶರೀರವನ್ನು ಹೊತ್ತ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಅಂತಿಮ ವಿಧಿಗಳನ್ನು ನೆರವೇರಿಸಲು ಕುಟುಂಬ ಸದಸ್ಯರಿಗೆ ಸುಮೀತ್ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
.ಇಸ್ರೇಲ್ಗೆ ಜಿ7 ಒಕ್ಕೂಟದ ಬೆಂಬಲ: ಇರಾನ್ ಅಸ್ಥಿರತೆಯ ಮೂಲ ಎಂದು ಖಂಡನೆ.ಟೆಹರಾನ್ನಲ್ಲಿರುವ ನಿವಾಸಿಗಳು ತಕ್ಷಣವೇ ತೆರವುಗೊಳಿಸಿ: ಡೊನಾಲ್ಡ್ ಟ್ರಂಪ್ ಕರೆ.
ಸ್ನೇಹಿತರು, ಕುಟುಂಬಸ್ಥರು ಸೇರಿದಂತೆ ಸ್ಥಳೀಯ ನಿವಾಸಿಗಳು ಸಭರ್ವಾಲ್ ಅವರ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿದರು.

ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಹೇಳಿಕೆ ಪ್ರಕಾರ, ಈ ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು ಸಹ ಪೈಲಟ್ ಕ್ಲೈವ್ ಕುಂದರ್ ಅವರ ನೇತೃತ್ವದಲ್ಲಿತ್ತು.

ಕ್ಯಾಪ್ಟನ್ ಸುಮೀತ್ ಅವರು 8,200 ಗಂಟೆಗಳ ವಿಮಾನ ಹಾರಾಟದ ಅನುಭವ ಹೊಂದಿದ್ದ ಲೈನ್ ಟ್ರೈನಿಂಗ್ ಕ್ಯಾಪ್ಟನ್ (LTC) ಆಗಿದ್ದರು. ಸಹ ಪೈಲಟ್ 1,100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದರು.
.Petrol Price: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್,ಡೀಸೆಲ್ ದರ ಹೀಗಿದೆ.ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ, ಬಂದೂಕು ಹಿಡಿದು ಬೆದರಿಕೆ ಹಾಕಿದ ಮಹಿಳೆ.
ಜೂನ್ 12ರಂದು (ಗುರುವಾರ) ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಕನಿಷ್ಠ 270 ಮಂದಿ ಮೃತಪಟ್ಟಿದ್ದರು.
.ಸೋನಮ್ ನನ್ನ ಮಗನಿಗೆ ಮಾಟ–ಮಂತ್ರ ಮಾಡಿಸಿರಬಹುದು: ರಾಜಾ ರಘುವಂಶಿ ತಂದೆ ಅನುಮಾನ.ವಿಮಾನ ದುರಂತ: ಉನ್ನತ ಮಟ್ಟದ ಸಮಿತಿಯ ಮೊದಲ ಸಭೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.