ಮುಂಬೈ: ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಮಧ್ಯಂತರ ಪರಿಹಾರವಾಗಿ ತಲಾ ₹25 ಲಕ್ಷ ಬಿಡುಗಡೆ ಮಾಡಿರುವುದಾಗಿ ಏರ್ ಇಂಡಿಯಾ ಹೇಳಿದೆ.

ಏರ್ ಇಂಡಿಯಾದ ಮಾತೃಸಂಸ್ಥೆಯಾದ ಟಾಟಾ ಸನ್ಸ್ ಈಗಾಗಲೇ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ಘೋಷಿಸಿದೆ. ಇದರೊಂದಿಗೆ ಹೆಚ್ಚುವರಿಯಾಗಿ ₹25ಲಕ್ಷ ಮಧ್ಯಂತರ ಪರಿಹಾರ ಲಭಿಸಲಿದೆ.

‘ಜೂನ್ 20ರಿಂದ ಮಧ್ಯಂತರ ಪರಿಹಾರ ವಿತರಣೆ ಆರಂಭವಾಗಿದೆ. ಇದುವರೆಗೆ 6 ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ. ಮೃತಪಟ್ಟ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಪರಿಹಾರ ಪಡೆಯಲು, ದಾಖಲೆಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಜೂನ್ 15ರಿಂದ ಸಹಾಯವಾಣಿ ಮತ್ತು ‘ಏಕಗವಾಕ್ಷಿ’ ಸೌಲಭ್ಯ ಆರಂಭಿಸಲಾಗಿದೆ’ ಎಂದು ಏರ್ ಇಂಡಿಯಾ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.