ನವದೆಹಲಿ: ದೇಶದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವುದರಿಂದ ಸಾಮಾನ್ಯ ಜನರ ಆರೋಗ್ಯ ಹದಗೆಡುತ್ತಿದೆ. ಇದು ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ. ‘ಜನರು ವಾಯುಮಾಲಿನ್ಯದ ವಿರುದ್ಧ ಮಾತನಾಡಬೇಕಿದೆ. ದೇಶದ ನಾಗರಿಕರ ಮೇಲೆ ಇದರ ಪರಿಣಾಮವನ್ನು ಕುರಿತ ಅಭಿಪ್ರಾಯಗಳನ್ನು ತನ್ನೊಂದಿಗೆ ಹಂಚಿಕೊಳ್ಳಬಹುದು’ ಎಂದಿದ್ದಾರೆ.

ಭಾರತದ ಕೋಟ್ಯಂತರ ಜನರು ವಾಯುಮಾಲಿನ್ಯದ ದುಷ್ಪರಿಣಾಮಕ್ಕೆ ತುತ್ತಾಗಿದ್ದಾರೆ. ಅದರಲ್ಲೂ ಹೆಚ್ಚಿನ ಸಂಖ್ಯೆಯ ಮಕ್ಕಳು ಹಾಗೂ ವಯಸ್ಕರು ಇದರಿಂದ ತೊಂದರೆ ಅನುಭವಿಸುತ್ತಿದ್ದಾರೆ. ದಿನಗೂಲಿ ಕಾರ್ಮಿಕರು ಮತ್ತು ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುವವರು ಗಂಭಿರ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ವಾಯುಮಾಲಿನ್ಯದಿಂದ ಭಾರತೀಯರು ಹೆಚ್ಚು ಬೆಲೆ ತೆರುತ್ತಿದ್ದೇವೆ. ನಮ್ಮ ಆರೋಗ್ಯದ ಜೊತೆಗೆ ಆರ್ಥಿಕತೆಯೂ ಕುಂಟಿತಗೊಳ್ಳುತ್ತಿದೆ. ನಾವು ಇದರ ವಿರುದ್ಧ ಧ್ವನಿ ಎತ್ತಬೇಕಿದೆ ಎಂದು ಹೇಳಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.