ಅಹಮದಾಬಾದ್: ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ದುರಂತಕ್ಕೀಡಾದ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರು ಇದ್ದರು ಎಂದೆನ್ನಲಾಗಿದೆ.

ಏರ್ ಇಂಡಿಯಾಗೆ ಸೇರಿದ AI–171 ವಿಮಾನವು ಗುರುವಾರ ಮಧ್ಯಾಹ್ನ 1.40ರ ಸುಮಾರಿಗೆ ಅಹಮದಾಬಾದ್ ವಿಮಾನನಿಲ್ದಾಣದಿಂದ ಟೇಕ್ಆಫ್ ಆಗಿತ್ತು.

ಪತನವಾಗುವ ಸಂದರ್ಭದಲ್ಲಿ ವಿಮಾನ ನೆಲಮಟ್ಟದಿಂದ 825 ಅಡಿ ಎತ್ತರದಲ್ಲಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ

ವಿಮಾನ ಪತನಗೊಂಡಿರುವ ಅಹಮದಾಬಾದ್ನ ಮೇಘಾನಿನಗರ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ

ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳನ್ನು ಮುಚ್ಚಲಾಗಿದೆ

ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ, ಆಂಬುಲೆನ್ಸ್ಗಳು ಧಾವಿಸಿವೆ

ವಿಮಾನ ಅಪಘಾತದ ಕುರಿತ ಮಾಹಿತಿಯನ್ನು ಕಾಲಕಾಲಕ್ಕೆ ನೀಡುವುದಾಗಿ ಏರ್ಇಂಡಿಯಾ ಹೇಳಿದೆ.

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರ ಪಟ್ಟಿ ಬಿಡುಗಡೆ

ಈ ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು ಸಹ ಪೈಲೆಟ್ ಕ್ಲೈವ್ ಕುಂದರ್ ಅವರ ನೇತೃತ್ವದಲ್ಲಿತ್ತು.

ಘಟನೆಗೆ ಏರ್ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಮೋಟಾರ್ಸ್ನ ಅಧ್ಯಕ್ಷ ///ಚಂದ್ರಶೇಖರ್ ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರ ಕುಟುಂಬದವರ ನೆರವಿಗೆ ಧಾವಿಸುವುದಾಗಿ ಹೇಳಿದ್ದಾರೆ.

ಅಹ್ಮದಾಬಾದ್ನಿಂದ ಹೊರಟ AI-171 ಗುರುವಾರ ಸಂಜೆಯ 6.25ಕ್ಕೆ ಬ್ರಿಟನ್ನ ಗ್ಯಾಟ್ವಿಕ್ನಲ್ಲಿ ಲ್ಯಾಂಡ್ ಆಗಬೇಕಿತ್ತು

ತುರ್ತು ಸಂಖ್ಯೆಯನ್ನು ಏರ್ ಇಂಡಿಯಾ ಆರಂಭಿಸಿದೆ 1800 5691 444

ಘಟನೆಗೆ ಉದ್ಯಮಿ ಗೌತಮ್ ಅದಾನಿ ಆಘಾತ

ವಿಮಾನ ಬಿದ್ದ ಕಟ್ಟಡದಲ್ಲಿದ್ದ 5 ವೈದ್ಯಕೀಯ ವಿದ್ಯಾರ್ಥಿಗಳ ಸಾವು

ಅಹಮದಾಬಾದ್ನಲ್ಲಿ ಸಂಭವಿಸಿರುವ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮೃತಪಟ್ಟಿದ್ದಾರೆ.

ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹1 ಕೋಟಿ ಪರಿಹಾರ ನೀಡುವುದಾಗಿ ಏರ್ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಸಮೂಹ ಘೋಷಿಸಿದೆ.

.Breaking News: 200ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಅಹಮದಾಬಾದ್ನಲ್ಲಿ ಪತನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.