

ರಸ್ತೆ ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ, ರಾಜ್ಯ ಸರ್ಕಾರ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಿದೆ.
ಚೈತನ್ಯ ಬೀಳಗಿ ಅವರಿಗೆ ಸರ್ಕಾರಿ ಉದ್ಯೋಗದ ಆದೇಶ ಪ್ರತಿ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಹಾರೈಸಿದ್ದಾರೆ.






