ನವದೆಹಲಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಅವರ ದುರ್ಮರಣಕ್ಕೆ ಕಾರಣವಾದ ವಿಮಾನ ಅಪಘಾತ ಕುರಿತು ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.

ಎನ್ಸಿಪಿ ವರಿಷ್ಠ ಶರದ್ ಪವಾರ್ ಮೊಮ್ಮಗ ಹಾಗೂ ಶಾಸಕರೂ ಆದ ರೋಹಿತ್ ಪವಾರ್ ಅವರು ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ಆಗ್ರಹ ಮಾಡಿದ್ದಾರೆ.

ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಖೀಡಾದ ಕುರಿತು ನಡೆಯುತ್ತಿರುವ ತನಿಖೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸುವ ಪತ್ರವನ್ನು ಇದೇ ವೇಳೆ ರಾಹುಲ್ ಗಾಂಧಿ ಅವರಿಗೆ ರೋಹಿತ್ ಪವಾರ್ ಹಸ್ತಾಂತರಿಸಿದರು.

‘ಈ ದಿನ ರೋಹಿತ್ ಪವಾರ್ ನನ್ನನ್ನು ಭೇಟಿ ಮಾಡಿದ್ದರು. ಅಜಿತ್ ಪವಾರ್ ಹಾಗೂ ಇತರರ ಸಾವಿಗೆ ಕಾರಣವಾದ ವಿಮಾನ ಅಪಘಾತ ಕುರಿತು ನಡೆಯುತ್ತಿರುವ ತನಿಖೆ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು’ ಎಂದು ರಾಹುಲ್ ಗಾಂಧಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಈ ವಿಷಯವು ಅತ್ಯಂತ ಗಂಭೀರವಾಗಿದ್ದರೂ, ಈವರೆಗೆ ಎಫ್ಐಆರ್ ದಾಖಲಿಸಿಲ್ಲ. ಕಾನೂನು ಪಾಲನೆ ಆಗುತ್ತಿಲ್ಲ. ಹೀಗಾಗಿ, ಈ ಘಟನೆ ಕುರಿತು ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ’ ಎಂದೂ ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.