ಲಖನೌ: ಮುಂಬರುವ ಚುನಾವಣೆಯಲ್ಲಿ ಸಮಾಜವಾದಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯು ಮುಂದುವರಿಯಲಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರಚಾರದಲ್ಲಿ ಭಾಗವಹಿಸುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮ ಪಕ್ಷವು ಹಲವು ಮೈತ್ರಿಕೂಟಗಳೊಂದಿಗೆ ಚುನಾವಣೆಗಳನ್ನು ಎದುರಿಸಿದೆ. ಆ ಅಪಾರ ಅನುಭವ ನಮಗಿದೆ. ಹಾಗಾಗಿ, ನಮ್ಮೊಂದಿಗಿನ ಮೈತ್ರಿಯಿಂದ ಮಿತ್ರಪಕ್ಷಗಳು ಪ್ರಯೋಜನ ಪಡೆಯುವಂತೆ ನೋಡಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ನಾವು ನಮ್ಮ ಮಿತ್ರಪಕ್ಷಗಳಿಗೆ ಯಾವ ಕಾರಣಕ್ಕೂ ದ್ರೋಹ ಬಗೆಯುವುದಿಲ್ಲ. ಈಗಿರುವ ಮೈತ್ರಿಯು ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಮಿತ್ರಪಕ್ಷಗಳೊಂದಿಗೆ ನಡೆಸುವ ಸಭೆಯ ವೇಳೆ, ಕ್ಷೇತ್ರ ಹಂಚಿಕೆಗಿಂತ ಚುನಾವಣೆಯಲ್ಲಿ ಗೆಲುವು ಸಾಧಿಸುವ ಕುರಿತು ಗಮನ ಹರಿಸುತ್ತೇವೆ. ಹಿಂದಿನ ಲೋಕಸಭಾ ಚುನಾವಣೆಯ ವೇಳೆಯೂ ನಾವು ಇದನ್ನೇ ಪಾಲಿಸಿದ್ದೆವು, ಅದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ 2027ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಕ್ಷೇತ್ರ ಹಂಚಿಕೆಯ ವಿಷಯದಲ್ಲಿ ವಿರೋಧ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಬರುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಹಾಗಾಗಿ, ಅಖಿಲೇಶ್ ಯಾದವ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.