ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಭಾರತ್‌ ಜೋಡೊ ನ್ಯಾಯ ಯಾತ್ರೆಯಲ್ಲಿ ಅಖಿಲೇಶ್‌ ಯಾದವ್‌ ಭಾಗಿ

Published 25 ಫೆಬ್ರುವರಿ 2024, 11:04 IST
Last Updated 25 ಫೆಬ್ರುವರಿ 2024, 11:04 IST
ಅಕ್ಷರ ಗಾತ್ರ

ಉತ್ತರ ಪ್ರದೇಶ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೊ ನ್ಯಾಯ ಯಾತ್ರೆ ಉತ್ತರ ಪ್ರದೇಶದ ಆಗ್ರಾ ತಲುಪಿದ್ದು, ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಪಾಲ್ಗೊಂಡಿದ್ದಾರೆ.

ಇದೇ ವೇಳೆ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇಂದು ರೈತರು ಸರ್ಕಾರದ ವಿರುದ್ಧ ನಿಂತಿದ್ದಾರೆ, ಸರ್ಕಾರ ರೈತರ ಶಕ್ತಿಗೆ ಹೆದರುತ್ತಿದೆ, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ತೊಲಗಿಸಿ ‘ಇಂಡಿಯಾ’ ಒಕ್ಕೂಟದ ಸಮ್ಮಿಶ್ರ ಸರ್ಕಾರ ರೈತರಿಗೆ ಗೌರವ ನೀಡುತ್ತದೆ. ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ನೀಡಬೇಕಾದ ಗೌರವವನ್ನು ಬಿಜೆಪಿ ನೀಡಿಲ್ಲ’ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಒಪ್ಪಂದವಾಗಿ ಕೆಲವು ದಿನಗಳಾಗಿದ್ದು, ಈ ನಡುವೆ, ಅಖಿಲೇಶ್‌ ಯಾದವ್‌ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಎರಡು ಪಕ್ಷಗಳ ನಡುವಿನ ಒಪ್ಪಂದವನ್ನು ಅಂತಿಮಗೊಳಿಸಲು ಸಹಾಯ ಮಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇಂದು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಈ ವಾರದ ಆರಂಭದಲ್ಲಿ, ಅಖಿಲೇಶ್ ಯಾದವ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದಲ್ಲಿ‌ 80 ಸ್ಥಾನಗಳ ಪೈಕಿ 17 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುವುದಾಗಿ ಒಪ್ಪಂದ ಮಾಡಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT