ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರಲು ಅಖಿಲೇಶ್‌ ಯಾದವ್‌ ನಿರ್ಧಾರ

Published 14 ಜನವರಿ 2024, 1:57 IST
Last Updated 14 ಜನವರಿ 2024, 1:57 IST
ಅಕ್ಷರ ಗಾತ್ರ

ಲಖನೌ: ಜನವರಿ 22ರಂದು ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಿದಕ್ಕಾಗಿ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ರಾಮಮಂದಿರ ಟ್ರಸ್ಟ್‌ಗೆ ಧನ್ಯವಾದ ತಿಳಿಸಿದ್ದಾರೆ. ಆದರೆ ಪ್ರಾಣ ಪ್ರತಿಷ್ಠಾಪನೆ ದಿನ ಭಾಗವಹಿಸದಿರಲು ನಿರ್ಧರಿಸಿದ್ದಾರೆ.

ಆಹ್ವಾನ ಸ್ವೀಕರಿಸಿರುವ ಬಗ್ಗೆ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಪತ್ರ ಬರೆದಿರುವ ಯಾದವ್, ಆಹ್ವಾನಿಸಿದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. ಈ ಪತ್ರವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಅವರು ನಂತರದ ದಿನಗಳಲ್ಲಿ ಕುಟುಂಬ ಸಮೇತರಾಗಿ ಮಂದಿರಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಯಾವುದೇ ಆಹ್ವಾನ ಬಂದಿಲ್ಲ. ಖುದ್ದಾಗಿ ಅಥವಾ ಅಂಚೆ ಮೂಲಕ ಯಾವುದೇ ಆಹ್ವಾನವನ್ನು ನಾನು ಸ್ವೀಕರಿಸಿಲ್ಲ ಎಂದು ಶುಕ್ರವಾರ ಅವರು ಹೇಳಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT