ಲಖನೌ: ಬಿಜೆಪಿಯು ಅಪ್ರಾಮಾಣಿಕತನದಿಂದ ಚುನಾವಣೆಗಳಲ್ಲಿ ಗೆಲುವು ಸಾಧಿಸುತ್ತಿದೆ. ಮುಂದಿನ ಚುನಾವಣೆಯಲ್ಲಿ ಜನರು ಅವರ ರಾಜಕೀಯ ತಂತ್ರಗಳಿಗೆ ಬಲಿಯಾಗದೇ, ಅವರನ್ನು ಸೋಲಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.

ಕೇವಲ ಅಭಿವೃದ್ಧಿಯಿಂದ ಮಾತ್ರ ಚುನಾವಣೆಗಳನ್ನು ಗೆಲ್ಲಲು ಸಾಧ್ಯವಿಲ್ಲ. ರಾಜಕೀಯ ತಂತ್ರಗಾರಿಕೆಯೂ ಅಷ್ಟೇ ಮುಖ್ಯವಾಗಿದೆ ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕ ಪ್ರಕಾಶ್ ಎನ್ನುವವರು ಹೇಳಿದ್ದರು. ಆ ವಿಡಿಯೊ ಜಾಲತಾಣಗಳಲ್ಲಿ ಹರಿದಾಡಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಅಖಿಲೇಶ್ ಯಾದವ್, ‘ಅಪ್ರಾಮಾಣಿಕತೆಯ ಮೂಲಕ ಬಿಜೆಪಿಯು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾಗಿ ಅವರೇ ಒಪ್ಪಿಕೊಂಡಿದ್ದಾರೆ. ಅವರ ಶಾಸಕರೇ, ಪಕ್ಷದ ಭ್ರಷ್ಟ ರಾಜಕೀಯವನ್ನು ಬಹಿರಂಗ ಪಡಿಸಿದ್ದಾರೆ. ಈಗ ಅವರನ್ನು ಬಿಜೆಪಿಯು ಉಚ್ಚಾಟಿಸಲಿದೆಯೇ ಅಥವಾ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ಸೋಲಿಸಲಿದ್ದಾರೆ. ಅವರು ಮತ್ತೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.