ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೆಲಂಗಾಣ: ಕುಡಿದ ಮತ್ತಿನಲ್ಲಿ ಪತ್ನಿ, ಮಗಳನ್ನು ಕೊಂದ ವ್ಯಕ್ತಿ!

Last Updated 30 ಮಾರ್ಚ್ 2023, 11:27 IST
ಅಕ್ಷರ ಗಾತ್ರ

ಹೈದರಾಬಾದ್: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಗಳನ್ನು ಕೊಲೆ ಮಾಡಿರುವ ಘಟನೆ ತೆಲಂಗಾಣದ ಭೂಪಾಲಪಲ್ಲಿ ಜಿಲ್ಲೆಯಲ್ಲಿ ನಡೆದಿದೆ.

ಬುಧವಾರ ರಾತ್ರಿ ಈ ದುರ್ಘಟನೆ ನಡೆದಿದೆ. ಆರೋಪಿಯು ಹೆಂಡತಿ ಮತ್ತು ಮಗಳೊಂದಿಗೆ ಜಗಳ ಮಾಡಿಕೊಂಡಿದ್ದಾನೆ. ತೀವ್ರ ವಾಗ್ವಾದದ ಬಳಿಕ ಕೊಡಲಿಯಿಂದ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ರಮಾ (43) ಮತ್ತು ಚಂದನಾ (17) ಎಂದು ಗುರುತಿಸಲಾಗಿದೆ.

ಕುಡಿದ ಮತ್ತಿನಲ್ಲಿ ಮನೆಗೆ ಬಂದ ಆರೋಪಿ ರಮಣಾಚಾರಿ, ಮದ್ಯ ಖರೀದಿಸಲು ಹಣ ನೀಡುವಂತೆ ಪತ್ನಿ ಬಳಿ ಒತ್ತಾಯಿಸಿದ್ದಾನೆ. ಆದರೆ, ಹಣ ನೀಡಲು ನಿರಾಕರಿಸಿದ ಪತ್ನಿಯೊಂದಿಗೆ ಆರೋಪಿ ಜಗಳವಾಡಿದ್ದಾನೆ. ತೀವ್ರ ವಾಗ್ವಾದದ ಸಂದರ್ಭದಲ್ಲಿ ಕೊಡಲಿಯಿಂದ ರಮಾ ಮೇಲೆ ಹಲ್ಲೆ ನಡೆಸಿದ್ದಾನೆ. ಚಂದನಾ ತಾಯಿಯನ್ನು ರಕ್ಷಿಸಲು ಬಂದಾಗ ಆಕೆಯ ಮೇಲೂ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ನೆರೆಹೊರೆಯವರು ಧಾವಿಸಿ ಒಂಬತ್ತು ವರ್ಷದ ಬಾಲಕನನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭೂಪಾಲಪಲ್ಲಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT