ಅಲಿಗಢ (ಉತ್ತರ ಪ್ರದೇಶ): ನೆರೆ ಮನೆಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕತ್ತು ಹಿಸುಕಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಜರಾರ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆರೋಪಿಯನ್ನು ಪೂರನ್ ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಯ ಪುತ್ರಿಯು ನೆರೆಮನೆಯ ಯುವಕನನ್ನು ಪ್ರೀತಿಸುತ್ತಿದ್ದು, ಆತನನ್ನೇ ಮದುವೆಯಾಗುವುದಾಗಿ ಹೇಳಿದ್ದರು. ಯುವಕ ತಮ್ಮ ಜಾತಿಯವರೇ ಆಗಿದ್ದರೂ ಪ್ರೇಮ ವಿವಾಹಕ್ಕೆ ಪೂರನ್ ಸಿಂಗ್ ಒಪ್ಪಿರಲಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.

ಅಲ್ಲದೇ, ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿಸದಿದ್ದರೆ ವಿಷ ಕುಡಿಯುವುದಾಗಿ ಮಗಳು ಬೆದರಿಕೆ ಹಾಕಿದ್ದಳು. ಇದರಿಂದ ಕೋಪಗೊಂಡ ಪೂರನ್ ಸಿಂಗ್ ಕತ್ತು ಹಿಸುಕಿ ಆಕೆಯ ಹತ್ಯೆಗೈದು, ಹತ್ತಿರದ ಜಮೀನಿನಲ್ಲಿ ಮಗಳನ್ನು ಹೂತಿದ್ದ ಎಂದೂ ಮಾಹಿತಿ ನೀಡಿದ್ದಾರೆ.

ಮಗಳು ನಾಪತ್ತೆಯಾಗಿದ್ದಾಳೆ ಎಂದು ಪೂರನ್ ಸಿಂಗ್ ಅವರ ಪತ್ನಿ ದೂರು ನೀಡಿದ ಬಳಿಕ ಪೊಲೀಸರು ತನಿಖೆ ನಡೆಸಿದಾಗ ಈ ವಿಚಾರ ಬಹಿರಂಗವಾಗಿದ್ದು, ಆರೋಪಿ ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.