ಚಂಡೀಗಡ:ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧಾದ ಮಾಜಿ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಸೇರಿದಂತೆ ನಾಲ್ವರು ಆರೋಪಿಗಳು ತಪ್ಪಿತಸ್ಥರು ಎಂದು ಪಂಚಕುಲದಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಶುಕ್ರವಾರ ಮಹತ್ವದ ತೀರ್ಪು ನೀಡಿರುವ ನ್ಯಾಯಾಲಯ ಜ.17ರಂದು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದೆ.

2002ರಲ್ಲಿ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆಯಾಗಿತ್ತು.

ಪ್ರಸ್ತುತ ಜೈಲು ಶಿಕ್ಷೆ ಅನುಭವಿಸುತ್ತಿರುವ ಗುರ್ಮೀತ್ ವಿಚಾರಣೆಯನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಲಾಗಿದೆ. ಇಬ್ಬರು ಮಹಿಳೆಯರ ಮೇಲಿನಅತ್ಯಾಚಾರ ಪ್ರಕರಣದ ಸಂಬಂಧ 2017ರಲ್ಲಿವಿಚಾರಣೆ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ 40 ಜನ ಸಾವಿಗೀಡಾಗಿದ್ದರು. ಆದ್ದರರಿಂದ, ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗಿದೆ.

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಮತ್ತು ಡೇರಾದ ಮಾಜಿ ವ್ಯವಸ್ಥಾಪಕ ರಂಜಿತ್ ಸಿಂಗ್ ಹತ್ಯೆ ಪ್ರಕರಣ ಎರಡರಲ್ಲೂ ಗುರ್ಮೀತ್ ರಾಮ್ ಸಿಂಗ್ ಆರೋಪಿಯಾಗಿದ್ದ.

ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರ್ಮೀತ್ ರಮ್ ರಹೀಂ ಸಿಂಗ್ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಪ್ರಸ್ತುತ ಜೈಲುವಾಸದಲ್ಲಿದ್ದಾನೆ.

ಮಹತ್ವದ ತೀರ್ಪು ಹೊರ ಬರುತ್ತಿರುವುದರಿಂದ ಪಂಚಕುಲದಲ್ಲಿ ಸ್ಥಳೀಯ ಆಡಳಿತ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.