ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌2002 ನರೋಡಾ ಗಾಮ್ ಗಲಭೆ: 67 ಆರೋಪಿಗಳನ್ನು ಖುಲಾಸೆಗೊಳಿಸಿದೆ ಗುಜರಾತ್‌ ಕೋರ್ಟ್‌

Last Updated 20 ಏಪ್ರಿಲ್ 2023, 13:45 IST
ಅಕ್ಷರ ಗಾತ್ರ

ಗುಜರಾತ್‌ : 2002ರ ನರೋಡಾ ಗಾಮ್ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಸೇರಿದಂತೆ ಎಲ್ಲ 67 ಆರೋಪಿಗಳನ್ನು ಗುಜರಾತ್‌ನ ವಿಶೇಷ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ. ಈ ಗಲಭೆಯಲ್ಲಿ 11 ಮಂದಿ ಹತ್ಯೆಯಾಗಿದ್ದರು.

ನ್ಯಾಯಮೂರ್ತಿ ಎಸ್‌.ಕೆ ಬಾಕ್ಸಿ ಪ್ರಕರಣದ ವಿಚಾರಣೆಯನ್ನು ನಡೆಸಿದ್ದು, ನರೋಡಾ ಗಾಮ್ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ. ಸುಪ್ರೀಂಕೋರ್ಟ್‌ ನೇಮಿಸಿದ್ದ ‘ವಿಶೇಷ ತನಿಖಾ ತಂಡ‘ ನರೋಡಾ ಗಾಮ್ ಗಲಭೆ ಪ್ರಕರಣದ ತನಿಖೆಯನ್ನು ನಡೆಸಿತ್ತು.

ಖುಲಾಸೆಗೊಂಡವರಲ್ಲಿ ಮಾಯಾ ಕೊಡ್ನಾನಿ, ವಿಶ್ವ ಹಿಂದೂ ಪರಿಷತ್‌ನ ಮಾಜಿ ನಾಯಕ ಜಯದೀಪ್ ಪಟೇಲ್ ಮತ್ತು ಬಜರಂಗದಳ ಮಾಜಿ ನಾಯಕ ಬಾಬು ಬಜರಂಗಿ ಇದ್ದಾರೆ. ಪ್ರಕರಣದಲ್ಲಿ ಒಟ್ಟು 86 ಮಂದಿ ಆರೋಪಿಗಳಾಗಿದ್ದು, ಅವರಲ್ಲಿ 18 ಮಂದಿ ವಿಚಾರಣೆ ಬಾಕಿ ಇರುವಾಗಲೇ ಸಾವನ್ನಪ್ಪಿದ್ದಾರೆ. ಒಬ್ಬ ಆರೋಪಿಯನ್ನು ನ್ಯಾಯಾಲಯ ಈ ಮೊದಲೇ ಬಿಡುಗಡೆಗೊಳಿಸಿತ್ತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT