ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಶಿಕ್ಷಕರ ಭಾರತ ಯಾತ್ರೆಗೆ ಚಾಲನೆ

Published 5 ಸೆಪ್ಟೆಂಬರ್ 2023, 13:16 IST
Last Updated 5 ಸೆಪ್ಟೆಂಬರ್ 2023, 13:16 IST
ಅಕ್ಷರ ಗಾತ್ರ

ಕನ್ಯಾಕುಮಾರಿ: ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ಶಿಕ್ಷಕರ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ಶಿಕ್ಷಕರ ಫೆಡರೇಷನ್ ನೀಡಿರುವ ಕರೆಯಂತೆ ಭಾರತ ಯಾತ್ರೆಗೆ ಮಂಗಳವಾರ ಇಲ್ಲಿ ಚಾಲನೆ ದೊರೆಯಿತು.

ಕನ್ಯಾಕುಮಾರಿ ಸಂಸದ ವಿಜಯ ವಸಂತ ಅವರು ಚಾಲನೆ ನೀಡಿದರು. ಶಿಕ್ಷಣ ತಜ್ಞ ಡಾ. ನಿರಂಜನಾರಾಧ್ಯ, ಫೆಡರೇಷನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ, ಖಜಾಂಚಿ ಹರಿಗೋವಿಂದನ್‌, ತಮಿಳುನಾಡು ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿ ರಂಗರಾಜನ್‌, ಅಧ್ಯಕ್ಷ ಲಕ್ಷ್ಮೀನಾರಾಯಣ, ಪುದುಚೇರಿ ಅಧ್ಯಕ್ಷ ಸೆಂಥಿಲ್ ಪಾಲ್ಗೊಂಡಿದ್ದರು.

‘ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಕೇಂದ್ರವು ತಾನು ತೆಗೆದುಕೊಂಡ ನಿರ್ಣಯಗಳನ್ನು ರಾಜ್ಯಗಳಿಗೆ ಕಳುಹಿಸಬೇಕು. ಹೊಸ ಪಿಂಚಣಿ ಯೋಜನೆ ನೌಕರರಿಗೆ ಮಾರಕವಾಗಿದೆ. ಶಿಕ್ಷಕರು ನೆಮ್ಮದಿಯಿಂದ ಕೆಲಸ ನಿರ್ವಹಿಸುವುದೇ ಕಷ್ಟವಾಗಿದೆ. ಸರ್ಕಾರವು ಈ ಕುರಿತು ತಕ್ಷಣ ಕ್ರಮ ಕೈಗೊಂಡು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು’ ಎಂದು ಬಸವರಾಜ ಗುರಿಕಾರ ಹೇಳಿದರು.

ಡಾ. ಪಿ.ನಿರಂಜನಾರಾಧ್ಯ ಮಾತನಾಡಿ, ‘ರಾಷ್ಟ್ರೀಯ ಶಿಕ್ಷಣ ನೀತಿಯಡಿ ಶಿಕ್ಷಣ ಹಾಗೂ ಶಿಕ್ಷಕರಿಗೆ ತೊಂದರೆಯಾಗಲಿದೆ. ಎನ್‌ಇಪಿಯಲ್ಲಿರುವ ವಿದ್ಯಾರ್ಥಿ ಹಾಗೂ ಶಿಕ್ಷಕ ವಿರೋಧಿ ಅಂಶಗಳನ್ನು ಕೈಬಿಡಬೇಕು. ಬಜೆಟ್‌ನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಹಣ ಮೀಸಲಿಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT