ಸಿಸಾಯಿ (ಜಾರ್ಖಂಡ್): ಭ್ರಷ್ಟ ಶಕ್ತಿಗಳ ಮುಖವಾಡವನ್ನು ಎನ್ಡಿಎ ಸರ್ಕಾರ ಕಳಚಲಿದೆ. ಮುಂದಿನ ಐದು ವರ್ಷಗಳಲ್ಲಿ ಭ್ರಷ್ಟಚಾರದಲ್ಲಿ ತೊಡಗಿರುವವರೆಲ್ಲರೂ ಕಾನೂನಿನಡಿಯಲ್ಲಿ ಕ್ರಮ ಎದುರಿಸಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಜಾರ್ಖಂಡ್ನ ಗುಮ್ಲಾದ ಸಿಸಾಯಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಮತ್ತು ‘ಇಂಡಿಯಾ’ ಮೈತ್ರಿಕೂಟದ ನಾಯಕರು ಭ್ರಷ್ಟರನ್ನು ಬೆಂಬಲಿಸಲು ದೆಹಲಿ ಮತ್ತು ರಾಂಚಿ ಸೇರಿದಂತೆ ಇತರೆಡೆಗಳಲ್ಲಿ ರ್ಯಾಲಿಯನ್ನು ನಡೆಸುತ್ತಿದ್ದಾರೆ. ಇದು ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ’ ಎಂದು ಬಂಧಿತ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಹೆಸರು ಉಲ್ಲೇಖಿಸದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಬುಡಕಟ್ಟು ಜಿಲ್ಲೆಗಳು ಹಿಂದುಳಿದಿರುವುದಕ್ಕೆ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ ಪ್ರಧಾನಿ ಮೋದಿ, ‘2004 ರಿಂದ 2014ರವರೆಗಿನ ಯುಪಿಎ ಆಡಳಿತದ ಅವಧಿಯಲ್ಲಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳು ಕೊಳೆಯುತ್ತಿದ್ದವು. ಆದರೆ, ಅದೇ ಸಮಯದಲ್ಲಿ ಬುಡಕಟ್ಟು ಜನಾಂಗದ ಮಕ್ಕಳು ಹಸಿವಿನಿಂದ ಮೃತಪಟ್ಟರು’ ಎಂದು ಹೇಳಿದರು.

ಬಡವರಿಗೆ ಉಚಿತ ಪಡಿತರ ವಿತರಣೆ ತಡೆಯಲು ಭೂಮಿಯ ಮೇಲಿನ ಯಾವುದೇ ಶಕ್ತಿಗೆ ಸಾಧ್ಯವಿಲ್ಲ. ಇದು ಮೋದಿಯ ಗ್ಯಾರಂಟಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.