ಮುಂಬೈ: ಪ್ರಜಾಪ್ರಭುತ್ವದ ನಾಲ್ಕು ಅಂಗಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಮಾಧ್ಯಮವು ಜನರ ಕಲ್ಯಾಣಕ್ಕಾಗಿ ಅಸ್ತಿತ್ವದಲ್ಲಿವೆ. ಇವು ಒಂದನ್ನು ಬಿಟ್ಟು ಇನ್ನೊಂದು ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಅಭಿಪ್ರಾಯಪಟ್ಟರು.

ಮುಂಬೈನ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಅವರು, ‘ಸಂವಿಧಾನದಲ್ಲಿ ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯ ಎಂಬ ತತ್ವಗಳನ್ನು ಪ್ರತಿಪಾದಿಸಲಾಗಿದೆ. ನ್ಯಾಯಾಂಗಕ್ಕೆ ಕತ್ತಿಯ ಬಲವೂ ಇಲ್ಲ, ಮಾತಿನ ಬಲವೂ ಇಲ್ಲ. ಕಾರ್ಯಾಂಗ ಇಲ್ಲದಿದ್ದರೆ ನ್ಯಾಯಾಂಗಕ್ಕೆ ತನಗೆ ಅಗತ್ಯವಿರುವ ಮೂಲಸೌಕರ್ಯ ಮತ್ತು ಕಾನೂನು ಶಿಕ್ಷಣ ನೀಡುವುದು ಕಷ್ಟವಾಗುತ್ತಿತ್ತು’ ಎಂದು ಹೇಳಿದರು.

ಕಾನೂನು ಶಿಕ್ಷಣವು ಹೆಚ್ಚು ಹೆಚ್ಚು ಪ್ರಾಯೋಗಿಕ ತರಬೇತಿಗಳೊಂದಿಗೆ ಅಭಿವೃದ್ಧಿ ಹೊಂದುತ್ತಿದೆ. ಆದಾಗ್ಯೂ ಮೂಲಸೌಕರ್ಯಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.

‘ನ್ಯಾಯಾಂಗಕ್ಕೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತು ಮುಖ್ಯಮಂತ್ರಿ ದೇವೆಂದ್ರ ಫಡಣವೀಸ್ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ರಾಜ್ಯದಲ್ಲಿ ಒದಗಿಸಲಾಗಿರುವ ಮೂಲಸೌಕರ್ಯಗಳು ಅತ್ಯುತ್ತಮವಾಗಿವೆ. ಅವುಗಳನ್ನು ಜಗತ್ತಿನ ಅತ್ಯುತ್ತಮ ವಿಶ್ವವಿದ್ಯಾಲಯಗಳೊಂದಿಗೆ ಹೋಲಿಕೆ ಮಾಡಬಹುದಾಗಿದೆ’ ಎಂದು ಪ್ರಶಂಸಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.