ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ ಅಸಾಂವಿಧಾನಿಕ: ಹೈಕೋರ್ಟ್‌

Published 22 ಮಾರ್ಚ್ 2024, 16:23 IST
Last Updated 22 ಮಾರ್ಚ್ 2024, 16:23 IST
ಅಕ್ಷರ ಗಾತ್ರ

ಲಖನೌ: ‘ಉತ್ತರಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2004’ ಅಸಾಂವಿಧಾನಿಕವಾದುದು. ಇದು, ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದೆ’ ಎಂದು ಅಲಹಾಬಾದ್ ಹೈಕೋರ್ಟ್‌ ಘೋಷಿಸಿದೆ. 

ರಾಜ್ಯದಲ್ಲಿ ಪ್ರಸ್ತುತ ಮದರಸಾಗಳಲ್ಲಿರುವ ವಿದ್ಯಾರ್ಥಿಗಳನ್ನು ಸಾಮಾನ್ಯ ವ್ಯವಸ್ಥೆಯ ಶಾಲೆಗಳಿಗೆ ದಾಖಲುಪಡಿಸಬೇಕು ಎಂದೂ ರಾಜ್ಯ ಸರ್ಕಾರಕ್ಕೆ ಕೋರ್ಟ್ ನಿರ್ದೇಶಿಸಿದೆ. 

ನ್ಯಾಯಮೂರ್ತಿಗಳಾದ ವಿವೇಕ್‌ ಚೌಧರಿ ಮತ್ತು ಸುಭಾಷ್ ವಿದ್ಯಾರ್ಥಿ ಅವರಿದ್ದ ಪೀಠವು ಈ ಆದೇಶ ನೀಡಿತು. ಅನ್ಷುಮನ್ ಸಿಂಗ್ ರಾಥೋರ್‌ ಅವರು ಈ ಕುರಿತು ರಿಟ್‌ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್‌ ಆದೇಶಕ್ಕೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಅಧ್ಯಕ್ಷ ಇಫ್ತಿಖಾರ್‌ ಅಹ್ಮದ್ ಜಾವೇದ್ ಅವರು, ‘ತೀರ್ಪು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT