ಲಖನೌ: ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಜುಲೈ 27ರಂದು ಹಾಜರಾಗುವಂತೆ ‘ಆದಿಪುರುಷ್’ ಚಿತ್ರತಂಡಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚಿಸಿದೆ.
ಚಿತ್ರವನ್ನು ನಿಷೇಧಿಸುವಂತೆ ಕೋರಿ ಕುಲದೀಪ್ ತಿವಾರಿ ಮತ್ತು ನವೀನ್ ಧವನ್ ಎಂಬವರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಯನ್ನು ನ್ಯಾಯಮೂರ್ತಿಗಳಾದ ರಾಜೇಶ್ ಸಿಂಗ್ ಚೌಹಾಣ್ ಮತ್ತು ಶ್ರೀ ಪ್ರಕಾಶ್ ಸಿಂಗ್ ಅವರನ್ನು ಒಳಗೊಂಡ ರಜಾಕಾಲದ ನ್ಯಾಯಪೀಠವು ವಿಚಾರಣೆ ನಡೆಸಿತು.
ಇದೇ 27ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಕ ಓಂ ರಾವುತ್, ನಿರ್ಮಾಪಕ ಭೂಷಣ್ ಕುಮಾರ್, ಸಂಭಾಷಣೆ ರಚನೆಕಾರ ಮನೋಜ್ ಮುಂತಾಶಿರ್ ಅವರಿಗೆ ಆದೇಶಿಸಿತು.
ಇದೇ ವೇಳೆ, ಚಿತ್ರವು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ತರುವಂತಿದೆಯೇ ಎಂದು ಪರಿಶೀಲಿಸಲು ಐವರು ಸದಸ್ಯರನ್ನು ಒಳಗೊಂಡ ಸಮಿತಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು. ಚಿತ್ರಕ್ಕೆ ಪ್ರಮಾಣಪತ್ರ ನೀಡಿರುವ ನಿರ್ಧಾರವನ್ನು ಮರುಪರಿಶೀಲಿಸುವಂತೆಯೂ ಸೂಚಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.