ಪ್ರಯಾಗ್ರಾಜ್: ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಹಾಗೂ ನ್ಯಾ.ಡಾ.ವೈ.ಕೆ.ಶ್ರೀವಾಸ್ತವ ಅವರನ್ನೊಳಗೊಂಡ ಪೀಠವು ಜುಬೈರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸಿದೆ. ಜತೆಗೆ ಎಫ್ಐಆರ್ನ ಅನುಸಾರ ತನಿಖೆ ನಡೆಯಲಿದೆ, ತನಿಖೆ ವೇಳೆ ಜುಬೈರ್ ಅವರನ್ನು ಬಂಧಿಸುವ ಸಾಧ್ಯತೆಗಳಿಲ್ಲ ಎಂದೂ ನ್ಯಾಯಪೀಠ ಹೇಳಿದೆ.

ಯತಿ ನರಸಿಂಹಾನಂದ ಅವರ ಕಾರ್ಯಕ್ರಮದ ಎಡಿಟ್ ಆಗಿರುವ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಜುಬೈರ್ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಮುಸ್ಲಿಂ ಸಮುದಾಯವನ್ನು ಯತಿಗಳ ವಿರುದ್ಧ ಪ್ರಚೋದಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್ನ ಕಾರ್ಯದರ್ಶಿ ಉದಿತಾ ತ್ಯಾಗಿ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.