ಅಲಹಾಬಾದ್: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದವರ ಫೋಟೊಗಳನ್ನು ಪ್ರದರ್ಶಿಸುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ, ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಸೋಮವಾರ ಮಧ್ಯಾಹ್ನ 2 ಗಂಟೆಗೆ ತೀರ್ಪು ಪ್ರಕಟಿಸಲಾಗುವುದು ಎಂದು ಮುಖ್ಯನ್ಯಾಯಮೂರ್ತಿ ಗೋವಿಂದ್ ಮಾಥುರ್ ಹಾಗೂ ನ್ಯಾಯಮೂರ್ತಿ ರಮೇಶ್ ಸಿನ್ಹಾ ಅವರಿದ್ದ ವಿಭಾಗೀಯ ಪೀಠವು ಭಾನುವಾರ ತಿಳಿಸಿತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಗುರುವಾರ ರಾತ್ರಿಯೇ ಫೋಟೊಗಳನ್ನು ಹಾಕಲಾಗಿತ್ತು. ಇವುಗಳಲ್ಲಿ ರಾಜಕಾರಣಿ ಸದಾಫ್ ಜಫರ್ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಎಸ್.ಆರ್.ಧಾರಪುರಿ ಅವರ ಛಾಯಾಚಿತ್ರಗಳೂ ಸೇರಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.