ಪ್ರಯಾಗ್ರಾಜ್: ಸಾಕಷ್ಟು ಸುರಕ್ಷತಾ ಕ್ರಮಗಳಿಲ್ಲದೆ ಪುರುಷರಿಂದ ಜಿಮ್ಗಳಲ್ಲಿ ತರಬೇತಿ ಪಡೆಯುತ್ತಿರುವ ಮಹಿಳೆಯರ ರಕ್ಷಣೆ ಮತ್ತು ಗೌರವದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಮೀರಠ್ನ ಜಿಮ್ ತರಬೇತುದಾರ ನಿತಿನ್ ಸೈನಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಂದಿನ ವಿಚಾರಣೆಯನ್ನು ಸೆ. 8ಕ್ಕೆ ನಿಗದಿಪಡಿಸಿದ್ದಾರೆ.

ಅಶ್ಲೀಲವಾಗಿ ಕಾಣುವಂತಹ ವಿಡಿಯೊಗಳನ್ನು ಆರೋಪಿಯು ಚಿತ್ರೀಕರಿಸಿದ್ದು, ಅವನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸಂತ್ರಸ್ತೆಯು ವಿಚಾರಣಾ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾರೆ.

ಸಂತ್ರಸ್ತೆಯ ಹೇಳಿಕೆಯನ್ನು ಪರಿಗಣಿಸಿದ ಹೈಕೋರ್ಟ್ ಪೀಠವು, ‘ಮೇಲ್ಮನವಿ ಸಲ್ಲಿಸಿದವರು ನಿರ್ವಹಿಸುತ್ತಿರುವ ಜಿಮ್ ಅನ್ನು ಕಾನೂನಿನಡಿ ನೋಂದಾಯಿಸಲಾಗಿದೆಯೇ? ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆಯೇ? ತರಬೇತುದಾರರು ಸ್ತ್ರೀಯರಾಗಿದ್ದಾರೆಯೇ ಅಥವಾ ಇಲ್ಲವೇ’ ಎಂಬ ಕುರಿತು ಅಫಿಡವಿಟ್ ಸಲ್ಲಿಸುವಂತೆ ಮೀರಠ್ನ ಬ್ರಹ್ಮಪುರಿ ಪೊಲೀಸ್ ಠಾಣೆಯ ತನಿಖಾಧಿಕಾರಿಗೆ ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.