ಮುಂಬೈ: ನಾನು ಜಿಂಕೆ ಮಾಂಸ ಸೇವನೆ ಮಾಡುತ್ತಿದ್ದೇನೆ ಎಂದು ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಬಿಷ್ಣೋಯಿ ಗ್ಯಾಂಗ್ನ ಸದಸ್ಯರು ನನ್ನನ್ನು ಹತ್ಯೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ಸುರೇಶ್ ಧಾಸ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಕಳೆದ ತಿಂಗಳು ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಸತೀಶ್ ಭೋಸಲೆ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸಲು ಸಂಚು ರೂಪಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ಸುರೇಶ್ ದಾಸ್ ಅವರ ಸಹಾಯಕರೆಂದು ಗುರುತಿಸಿಕೊಂಡಿದ್ದ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಬಿಜೆಪಿ ಪದಾಧಿಕಾರಿ ಭೋಸಲೆ, ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪ ಎದುರಿಸುತ್ತಿದ್ದಾರೆ.

‘ಬೀಡ್ ಜಿಲ್ಲೆಯ ಪಾರ್ಲಿಯ ಕೆಲವು ನಾಯಕರು ನನ್ನ ಕ್ಷೇತ್ರಕ್ಕೆ ಬಂದು ಭೋಸಲೆಯಿಂದ ಜಿಂಕೆ ಮಾಂಸವನ್ನು ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದರು. ನಾನು ವಿಠಲನ ಅನುಯಾಯಿಯಾಗಿದ್ದು, ಯಾವುದೇ ಮಾಂಸವನ್ನು ಸೇವಿಸುವುದಿಲ್ಲ’ ಎಂದು ಧಾಸ್ ಮರಾಠಿ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

ರಾಜಸ್ಥಾನದ ಬಿಷ್ಣೋಯಿ ಸಮುದಾಯವು ಜಿಂಕೆಯನ್ನು ಪವಿತ್ರವೆಂದು ಪರಿಗಣಿಸುತ್ತದೆ. ಲಾರೆನ್ಸ್ ಬಿಷ್ಣೋಯಿ ಅವರಂತಹ ದರೋಡೆಕೋರರು ನನ್ನ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಧಾಸ್ ದೂರಿದ್ದಾರೆ.

ಈ ವಿಚಾರವನ್ನು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರೊಂದಿಗೆ ಚರ್ಚಿಸುವುದಾಗಿ ಧಾಸ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.