ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರವಾಹ ಪೀಡಿತ ಆಂಧ್ರ, ತೆಲಂಗಾಣಕ್ಕೆ ಅಲ್ಲು, ಚಿರಂಜೀವಿ ತಲಾ ₹1 ಕೋಟಿ ದೇಣಿಗೆ

Published 4 ಸೆಪ್ಟೆಂಬರ್ 2024, 9:35 IST
Last Updated 4 ಸೆಪ್ಟೆಂಬರ್ 2024, 9:35 IST
ಅಕ್ಷರ ಗಾತ್ರ

ಹೈದರಾಬಾದ್: ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ತತ್ತರಿಸಿವೆ. ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಅಪಾರ ಪ್ರಮಾಣದ ಆಸ್ತಿ–ಪಾಸ್ತಿ ನಷ್ಟವಾಗಿದೆ.

ಸಂತ್ರಸ್ತರಿಗೆ ನೆರವು ಸೇರಿದಂತೆ ಪರಿಹಾರ ಕಾರ್ಯಗಳಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಟ ಅಲ್ಲು ಅರ್ಜುನ್ ಮತ್ತು ನಟ ಚಿರಂಜೀವಿ ತಲಾ ₹1ಕೋಟಿ ಹಾಗೂ ನಟ ಮಹೇಶ್‌ಬಾಬು ₹50 ಲಕ್ಷ ದೇಣಿಗೆ ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅಲ್ಲು ಅರ್ಜುನ್, 'ಈ ಭೀಕರ ಪ್ರವಾಹದಿಂದಾಗಿ ಎರಡು ರಾಜ್ಯಗಳು ತತ್ತರಿಸಿವೆ. ಸಂತ್ರಸ್ತರಿಗೆ ನೆರವು ಒದಗಿಸಲು ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡು ರಾಜ್ಯಗಳಿಗೆ ತಲಾ ₹50 ಲಕ್ಷ ದೇಣಿಗೆ ನೀಡಲಾಗಿದೆ. ಜನರ ಸುರಕ್ಷತೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ತಿಳಿಸಿದ್ದಾರೆ.

‘ತೆಲುಗು ರಾಜ್ಯಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದಾಗಿ ನನಗೆ ಬೇಸರವಾಗಿದೆ. ಇಂತಹ ಸವಾಲಿನ ಸಮಯದಲ್ಲಿ ಸಂತ್ರಸ್ತರಿಗೆ ನೆರವು ಒದಗಿಸುವುದು ಅಗತ್ಯವಾಗಿದೆ. ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ತಲಾ ₹1ಕೋಟಿ ದೇಣಿಗೆ ನೀಡಲಾಗಿದೆ’ ಎಂದು ಎಕ್ಸ್‌ನಲ್ಲಿ ಚಿರಂಚೀವಿ ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮಹೇಶ್‌ಬಾಬು, 'ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ₹50 ಲಕ್ಷ ದೇಣಿಗೆ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರು ಸಹಾಯಹಸ್ತ ಚಾಚುವಂತೆ ಹಾಗೂ ಒಟ್ಟಿಗೆ ಈ ಪರಿಸ್ಥಿತಿಯನ್ನು ಎದುರಿಸುವಂತೆ ಜನರಲ್ಲಿ ಮಹೇಶ್‌ ಮನವಿ ಮಾಡಿದ್ದಾರೆ'.

ಮಳೆ ಸಂಬಂಧ ಅವಘಡಗಳಿಂದ ಆಂಧ್ರಪ್ರದೇಶದಲ್ಲಿ 17 ಮತ್ತು ತೆಲಂಗಾಣದಲ್ಲಿ 16 ಮಂದಿ ಅಸುನೀಗಿದ್ದಾರೆ. ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎರಡೂ ರಾಜ್ಯಗಳ ಹಲವೆಡೆ ರಸ್ತೆ ಮತ್ತು ರೈಲು ಸಂಪರ್ಕಗಳು ಕಡಿತವಾಗಿದ್ದು, ಸಹಸ್ರಾರು ಎಕರೆ ಕೃಷಿ ಪ್ರದೇಶ ಜಲಾವೃತವಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದ್ದು, ಪರಿಹಾರ ಕಾರ್ಯಗಳೂ ಸಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT