ಹೈದರಾಬಾದ್: ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಿಸುವ ಕರ್ನಾಟಕದ ಯೋಜನೆಗೆ ಮಹಾರಾಷ್ಟ್ರ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ, ಈಗ ತೆಲಂಗಾಣ ಕೂಡ ತಕರಾರು ತೆಗೆದಿದೆ.

ಅಣೆಕಟ್ಟೆಯ ಎತ್ತರ ಹೆಚ್ಚಿಸುವ ಯೋಜನೆ ಅನುಷ್ಠಾನಕ್ಕೆ ಕರ್ನಾಟಕ ಮುಂದಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಬಿಆರ್ಎಸ್ ಪಕ್ಷ ಎಚ್ಚರಿಸಿದೆ.

‘ಕರ್ನಾಟಕದ ಈ ನಡೆ ತೆಲಂಗಾಣ ರೈತರ ಪಾಲಿಗೆ ಮರಣಶಾಸನವಾಗಲಿದೆ’ ಎಂದು ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಟೀಕಿಸಿದ್ದಾರೆ.

ಇದೇ ವಿಚಾರವಾಗಿ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ‘ರಾಜ್ಯದ ರೈತರ ವಿರುದ್ಧ ಅಪಾಯಕಾರಿ ಸಂಚು ರೂಪಿಸಲಾಗುತ್ತಿರುವ ಈ ಸಂದರ್ಭದಲ್ಲಿ ರೇವಂತ ರೆಡ್ಡಿ ದೆಹಲಿಯಲ್ಲಿ ಐಷಾರಾಮಿ ಜೀವನ ಕಳೆಯುತ್ತಿದ್ದಾರೆ’ ಎಂದಿದ್ದಾರೆ.

ಈ ವಿಚಾರ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರೇವಂತ ರೆಡ್ಡಿ ಅವರು ತೆಲಂಗಾಣ ರೈತರಿಗೆ ಉತ್ತರಿಸಬೇಕು ಎಂದೂ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.