ನವದೆಹಲಿ: ‘ಕರ್ನಾಟಕದಲ್ಲಿ ಈಗಾಗಲೇ ಮಾದರಿ ಬಿಲ್ಡರ್ ಮತ್ತು ಏಜೆಂಟ್ ಖರೀದಿ ಒಪ್ಪಂದವನ್ನು ಅಂಗೀಕರಿಸಲಾಗಿದೆ’ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಕರ್ನಾಟಕ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಒಪ್ಪಂದ ನಿಯಮಗಳ ಬಗ್ಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದೆ.

ರೆರಾ ಅನ್ವಯ ನೀಡಲಾದ ಆದೇಶವನ್ನು ಕಾಲಮಿತಿಯಲ್ಲಿ ಜಾರಿಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆದೇಶಿಸಿ 2021ರ ಅಕ್ಟೋಬರ್ 30, ಮತ್ತು 2021ರ ನವೆಂಬರ್ 12 ರಂದು ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ತಿಳಿಸಿದೆ.

ಅಶ್ವಿನಿ ಕುಮಾರ್ ಉಪಾಧ್ಯಾಯ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿರುವ ಕರ್ನಾಟಕ, ವಸ್ತುಸ್ಥಿತಿಗೆ ವಿರುದ್ಧವಾಗಿರುವ ಕಾರಣ ಈ ಅರ್ಜಿಯನ್ನು ವಜಾಮಾಡಬೇಕು ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.