ಆಲೂರು: ಸಮಾಜದ ಎಲ್ಲ ವರ್ಗಗಳ ನಡುವಿನ ಒಗ್ಗಟ್ಟು ದೇಶದ ಪ್ರಗತಿಗೆ ಅವಶ್ಯ ಎಂದು ಕರ್ನಾಟಕ ದಕ್ಷಿಣ ಪ್ರಾಂತದ ಕಾರ್ಯಕಾರಣಿ ಸದಸ್ಯರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಗಣಪತಿ ಹೆಗಡೆ ತಿಳಿಸಿದರು.

ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ರಾಷ್ಟ್ರೋದಯ ಸೇವಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ‘ಸಾಮಾಜಿಕ ಸದ್ಭಾವ ಸಭೆ’ಯನ್ನು ಉದ್ದೇಶಿಸಿ ಮಾತನಾಡಿದರು.

ಸಮಾಜದಲ್ಲಿ ಸಾಮರಸ್ಯ, ಏಕತೆ ಮತ್ತು ಪರಸ್ಪರ ಗೌರವದ ಮಹತ್ವ ಇರಬೇಕು. ಒಬ್ಬರನ್ನೊಬ್ಬರು ಜಾತಿ, ಮತ ಮೀರಿ, ಪರಸ್ಪರ ಪ್ರೀತಿ ವಿಶ್ವಾಸದಿಂದ ಸಾಗಿದರೆ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ. ನಾವುಗಳೆಲ್ಲರೂ ಎಂದೆಂದೂ ಸ್ವದೇಶಿ ವಸ್ತುಗಳನ್ನು ಹೆಚ್ಚು ಬಳಸಬೇಕು. ಕುಟುಂಬದ ವ್ಯವಸ್ಥೆಗೆ ಹೆಚ್ಚು ಒತ್ತು ನೀಡುವುದರೊಂದಿಗೆ ನಾವೆಲ್ಲರೂ ದೇಶ ಮೊದಲು ಎಂಬ ಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ತಾಲೂಕಿನ ಎಲ್ಲ ಸಮುದಾಯಗಳ ಮುಖಂಡರು ಹಾಗೂ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ವಿವಿಧ ಸಮುದಾಯಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡು ಸಾಮಾಜಿಕ ಸದ್ಭಾವನೆಗಾಗಿ ಒಗ್ಗಟ್ಟಿನ ಅಗತ್ಯ ಒತ್ತಿ ಹೇಳಿದರು. ಸಮಾಜದಲ್ಲಿ ಒಗ್ಗಟ್ಟು ಮತ್ತು ಸಹಬಾಳ್ವೆ ಹೆಚ್ಚಿಸಲು ಇಂತಹ ಕಾರ್ಯಕ್ರಮಗಳು ಇನ್ನಷ್ಟು ಅಗತ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-36-1275806770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.