ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವಿಲೀನವಾಗಲಿದೆ ಅಮರ್ ಜವಾನ್ ಜ್ಯೋತಿ

Last Updated 21 ಜನವರಿ 2022, 6:35 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್ ಜ್ಯೋತಿಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿನ ಅಮರ್ ಚಕ್ರದಲ್ಲಿ ವಿಲೀನಗೊಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

1971ರ ಆಗಸ್ಟ್‌ನಲ್ಲಿ ಸ್ವಾತಂತ್ರ್ಯೋತ್ಸವದ ಬಳಿಕ ಇಂಡಿಯಾ ಗೇಟ್ ಬಳಿ ಅಮರ್ ಜವಾನ್ ಜ್ಯೋತಿಯನ್ನು ಉರಿಸಲಾಗಿತ್ತು. 50 ವರ್ಷದ ಬಳಿಕ ಅದನ್ನು ಸ್ಥಳಾಂತರಿಸಿ, ಅಲ್ಲಿಂದ 400 ಮೀಟರ್ ದೂರದಲ್ಲಿನ ರಾಷ್ಟ್ರೀಯ ಯುದ್ಧ ಸ್ಮಾರಕದ ಅಮರ್ ಚಕ್ರದಲ್ಲಿ ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ.

ಶುಕ್ರವಾರ ಸಂಜೆ 4 ಗಂಟೆಗೆ ಜ್ಯೋತಿ ವಿಲೀನ ಕಾರ್ಯಕ್ರಮ ನಡೆಯಲಿದೆ.

1947ರ ಬಳಿಕ ನಡೆದ ಭಾರತ–ಪಾಕಿಸ್ತಾನ ಯುದ್ಧ ಮತ್ತು ಚೀನಾ ಜತೆಗಿನ ಸಂಘರ್ಷ ಹಾಗೂ ಕರ್ತವ್ಯದಲ್ಲಿರುವಾಗ ಹುತಾತ್ಮರಾದ ಯೋಧರ ನೆನಪಿಗೆ, ಅವರ ಹೆಸರನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಮೂಡಿಸಲಾಗಿದೆ.

2019ರ ಫೆಬ್ರುವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಉದ್ಘಾಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT