ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರನಾಥ ಯಾತ್ರೆ: ಮೃತರ ಸಂಖ್ಯೆ 27ಕ್ಕೆ ಏರಿಕೆ

Published 16 ಜುಲೈ 2023, 12:36 IST
Last Updated 16 ಜುಲೈ 2023, 12:36 IST
ಅಕ್ಷರ ಗಾತ್ರ

ಶ್ರೀನಗರ: ಅಮರನಾಥ ಯಾತ್ರೆ ಕೈಗೊಂಡಿದ್ದ ಯಾತ್ರಾರ್ಥಿಗಳು ಇಂದು(ಭಾನುವಾರ) ಪ್ರತ್ಯೇಕ ಘಟನೆಗಳಲ್ಲಿ ಇಬ್ಬರೂ ಮೃತಪಟ್ಟಿದ್ದು, ಈ ಯಾತ್ರೆಯಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್‌ ಜಿಲ್ಲೆಯಲ್ಲಿ ಯಾತ್ರಾರ್ಥಿಗಳ ವಾಹನವು ಅಪಘಾತಕ್ಕೆ ಈಡಾಗಿ ಒಬ್ಬರು ಮೃತಪಟ್ಟಿದ್ದು, ಎಂಟು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಪಹಲ್ಗಾಮ್ ಮಾರ್ಗದ ಪಿಸ್ಸುಟಾಪ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆಯಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮೃತಪಟ್ಟಿದ್ದಾರೆ.

ಮೃತರನ್ನು ಉರ್ಮಿಲಾಬೆನ್ ಮೋದಿ (53) ಹಾಗೂ ಛತ್ತೀಸ್‌ಗಢದ ಮೇಘನಾಥ್ (65) ಗುರುತಿಸಲಾಗಿದೆ.

ರಸ್ತೆ ಅಪಘಾತದಲ್ಲಿ ಗಾಯಾಗೊಂಡವರನ್ನು ರಕ್ಷಿಸಿ, ಬಾಲ್ಟಾಲ್ ಬೇಸ್ ಕ್ಯಾಂಪ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT