ಶ್ರೀನಗರ: ಕಾಶ್ಮೀರದಲ್ಲಿ ಭಾರಿ ಮಳೆಯ ಪರಿಣಾಮ ಪಹಲ್ಗಾಮ್ ಮತ್ತ ಬಲ್ತಾಲ್ ಮಾರ್ಗಗಳ ಮೂಲಕ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದೆ.

ಇಲ್ಲಿಯವರೆಗೆ, 3.93 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಗುಹಾ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಗುರುವಾರ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು ಎಂದೂ ಇಲಾಖೆ ತಿಳಿಸಿದೆ.

ಮಳೆಯ ಪರಿಣಾಮ ಮೂಲ ಶಿಬಿರಗಳಿಂದ ಯಾತ್ರಾರ್ಥಿಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಆದ್ದರಿಂದ, ಜುಲೈ 31ರವರೆಗೆ ಭಗವತಿ ನಗರದಿಂದ ಜಮ್ಮುವಿನಿಂದ ಬಾಲ್ಟಾಲ್ ಮತ್ತು ನುನ್ವಾನ್ನ ಮೂಲ ಶಿಬಿರಗಳ ಕಡೆಗೆ ಯಾವುದೇ ಬೆಂಗಾವಲು ಸಂಚಾರವನ್ನು ಅನುಮತಿಸಲಾಗುವುದಿಲ್ಲ ಎಂದು ಡಿಐಪಿಆರ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.