ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನತಂತ್ರದಲ್ಲಿ ಅಧಿಕಾರ ಹಂಚಿಕೆ ಇರಬೇಕು: ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೆನ್‌

Published 17 ಜುಲೈ 2023, 14:47 IST
Last Updated 17 ಜುಲೈ 2023, 14:47 IST
ಅಕ್ಷರ ಗಾತ್ರ

ಸುದೀಪ್ತೊ ಚೌಧರಿ ಬೋಲ್ಪುರ್ (ಪಶ್ಚಿಮ ಬಂಗಾಳ): ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗೂಡಲು ಪ್ರತಿಪಕ್ಷಗಳು ಕೈಗೊಂಡಿರುವ ನಿರ್ಧಾರವನ್ನು ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೆನ್‌ ಸ್ವಾಗತಿಸಿದ್ದಾರೆ.

‘ಪ್ರಜಾಪ್ರಭುತ್ವದಲ್ಲಿ ಅಧಿಕಾರದ ಹಂಚಿಕೆ ಇರಬೇಕು. ಜನತಂತ್ರ ವ್ಯವಸ್ಥೆ ಕೂಡ ಇದನ್ನೇ ಅಪೇಕ್ಷಿಸುತ್ತದೆ’ ಎಂದಿದ್ದಾರೆ.

‘ಮಣಿಪುರದ ಹಿಂಸಾಚಾರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು. ಶಾಂತಿ ಕಾಪಾಡುವಂತೆ ಕಣಿವೆ ರಾಜ್ಯದ ಜನರಿಗೆ ಪ್ರಧಾನಿ ಮೋದಿ ಅವರು ಮನವಿ ಮಾಡಬೇಕಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಅನರ್ಹತೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರಾಹುಲ್‌ ಅವರಂತೆ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಯಾವೊಬ್ಬ ಸಂಸದರು ಅನರ್ಹತೆಗೊಂಡಿಲ್ಲ. ಇದನ್ನು ಅವಲೋಕಿಸಿದರೆ ಭಾರತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT