ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ: ಟೆಸ್ಲಾ ಸೌಂಡ್ –ಲೈಟ್ ಶೋನಲ್ಲಿ ಮೈನವಿರೇಳಿಸಿದ ‘ಜೈ ಶ್ರೀರಾಮ್‌’ ಘೋಷಣೆ

Published 22 ಜನವರಿ 2024, 12:38 IST
Last Updated 22 ಜನವರಿ 2024, 12:38 IST
ಅಕ್ಷರ ಗಾತ್ರ

ನವದೆಹಲಿ: ಅಮೆರಿಕ-ಕೆನಡಾ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದಲ್ಲಿ ಅನಿವಾಸಿ ಭಾರತೀಯರು ‘ಜೈ ಶ್ರೀರಾಮ್‌’ ಎಂದು ಘೋಷಣೆಗಳನ್ನು ಕೂಗುವ ಮೂಲಕ ರಾಮಮಂದಿರ ಉದ್ಘಾಟನೆ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಮಿನ್ನೇಸೋಟನ ಎಚ್‌ಎಸ್‌ಎಂಎನ್‌ ಪಾರ್ಕಿಂಗ್ ಲಾಟ್‌ನಲ್ಲಿ 75 ಕ್ಕೂ ಹೆಚ್ಚು ಟೆಸ್ಲಾ ಕಾರುಗಳಿಗೆ ದೀಪಾಲಂಕಾರ ಮಾಡಲಾಗಿದೆ. ಈ ದೃಶ್ಯವನ್ನು ಡ್ರೋನ್‌ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ. ಜತೆಗೆ ಅಲ್ಲಿನ ಜನರು ‘ಜೈ ಶ್ರೀರಾಮ್’ ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೀಗ ಈ ವಿಡಿಯೊ ನೆಟ್ಟಿಗರನ್ನು ಆಕರ್ಷಿಸಿದೆ.

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಇಂದು (ಸೋಮವಾರ) ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅತ್ಯಂತ ಸಂಭ್ರಮದಿಂದ ನಡೆಯಿತು. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್,ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT