ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

Published 23 ಸೆಪ್ಟೆಂಬರ್ 2023, 16:30 IST
Last Updated 23 ಸೆಪ್ಟೆಂಬರ್ 2023, 16:30 IST
ಅಕ್ಷರ ಗಾತ್ರ

ನವದೆಹಲಿ: 2024ರಲ್ಲಿ ಕೇಂದ್ರದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.‌

ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ‘ಕೇಂದ್ರದಲ್ಲಿ ನಮ್ಮ‌ ಸರ್ಕಾರ ಬಂದರೆ ಮಾಡುವ ಮೊದಲ ಕೆಲಸವೆಂದರೆ ಮಸೂದೆಗೆ ತಿದ್ದುಪಡಿ ಮಾಡುವುದು. ಈಗ ಮಸೂದೆ ಜಾರಿಗೆ ತರುವಲ್ಲಿ ಯಾವುದೇ ಪ್ರಮುಖ ಕಾನೂನು ತೊಡಕುಗಳಿಲ್ಲ ಎಂದು ತಿಳಿಸಿದ್ದಾರೆ. ‘ಮಹಿಳಾ ಮಸೂದೆ ಮಂಡನೆಯ ಹಿಂದಿನ ಉದ್ದೇಶವೇನು? ಮಹಿಳೆಯರಿಗೆ ಮೀಸಲಾತಿ ನೀಡಲು ಬಿಜೆಪಿ ಬಯಸುವುದಿಲ್ಲ’ ಎಂದರು.

‘ಸರೋಜಿನಿ ನಾಯ್ಡು ಅವರು ಕಾಂಗ್ರೆಸ್‌ನ ಪ್ರಥಮ ಮಹಿಳಾ ಅಧ್ಯಕ್ಷರಾಗಿದ್ದರು. ನೂರು ವರ್ಷಗಳಲ್ಲಿ ಯಾವುದೇ ಮಹಿಳೆ ಬಿಜೆಪಿ ಅಥವಾ ಆರ್‌ಎಸ್‌ಎಸ್‌ ಅಧ್ಯಕ್ಷರಾಗಿದ್ದಾರೆಯೇ?’ ಎಂದು ಪ್ರಶ್ನಿಸಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸದಿದ್ದರೆ ಜನರು ಗುಲಾಮರಾಗುತ್ತಾರೆ’ ಎಂದು ಖರ್ಗೆ ಎಚ್ಚರಿಕೆ ನೀಡಿದರು.

‘ಅಸ್ಪೃಶ್ಯರೆಂಬ ಕಾರಣಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಹೊಸ ಸಂಸತ್ ಭವನದ ಶಂಕುಸ್ಥಾಪನೆಗೆ ಆಹ್ವಾನಿಸಿರಲಿಲ್ಲ. ಅಸ್ಪೃಶ್ಯರು ಶಂಕುಸ್ಥಾಪನೆ ನೆರವೇರಿಸಿದರೆ ಸಹಜವಾಗಿ ಅದನ್ನು ಗಂಗಾ ನೀರಿನಿಂದ ತೊಳೆಯಬೇಕಾಗುತ್ತದೆ’ ಎಂದು ಅವರು ಮಾಜಿ ರಾಷ್ಟ್ರಪತಿಯ ಜಾತಿ ಉಲ್ಲೇಖಿಸಿ ಹೇಳಿದ್ದಾರೆ. ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿರಲಿಲ್ಲ. ಹಲವು ಗಣ್ಯರು ಮತ್ತು ಸಿನಿಮಾ ತಾರೆಯರನ್ನು ಆಹ್ವಾನಿಸಲಾಗಿತ್ತು. ಇದು ರಾಷ್ಟ್ರಪತಿಗೆ ಮಾಡಿದ ಅವಮಾನ ಖರ್ಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT