ಮುಕೇಶ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಪಿಎಂನ ಹಿರಿಯ ನಾಯಕ ಮತ್ತು ರಾಜ್ಯ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್, ‘ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು, ನಟಿಯರ ಮೇಲೆ ನಟರು ನಡೆಸಿರುವ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಬಹಿರಂಗಪಡಿಸಿದ್ದು, ಈ ಬಗ್ಗೆ ರಾಜ್ಯ ಸರ್ಕಾರವು ಕಠಿಣ ಕ್ರಮ ತೆಗೆದುಕೊಂಡಿದೆ. ಈ ವರದಿಯು ಈಗ ಕೇರಳ ಹೈಕೋರ್ಟ್ ಮುಂದೆಯೂ ಇದೆ’ ಎಂದು ಹೇಳಿದ್ದಾರೆ.