ನವದೆಹಲಿ: ದೇಶದಲ್ಲಿ ಹ್ಯೂಮನ್ ಮೆಟಾನ್ಯುಮೋ ವೈರಾಣು (ಎಚ್ಎಂಪಿವಿ) ಸೋಂಕಿನ ಪ್ರಕರಣಗಳು ಪತ್ತೆಯಾಗಿರುವ ಬೆನ್ನಲ್ಲೇ ಸೋಂಕಿಗೆ ಸಂಬಂಧಿಸಿ ನಿಗಾ ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ನಿರ್ದೇಶನ ನೀಡಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲೀಲ ಶ್ರೀವಾಸ್ತವ ಅಧ್ಯಕ್ಷತೆಯಲ್ಲಿ ನಡೆದ ವರ್ಚುವಲ್ ಸಭೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಉಸಿರಾಟ ಸಂಬಂಧಿತ ಕಾಯಿಲೆಗಳು ಮತ್ತು ಎಚ್ಎಂಪಿವಿ ಪ್ರಕರಣಗಳ ನಿರ್ವಹಣೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.

ಸಭೆಯಲ್ಲಿ ಆರೋಗ್ಯ ಸಂಶೋಧನಾ ಇಲಾಖೆಯ ಕಾರ್ಯದರ್ಶಿ ಡಾ. ರಾಜೀವ್ ಬಹ್ಲ್, ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ. ಅತುಲ್ ಗೋಯೆಲ್, ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ), ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್), ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್ಐವಿ) ಮತ್ತು ಐಡಿಎಸ್ಪಿಯ ರಾಜ್ಯ ಕಣ್ಗಾವಲು ಘಟಕಗಳ ತಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು.

ಚೀನಾದಲ್ಲಿ ಎಚ್ಎಂಪಿವಿ ಪ್ರಕರಣಗಳ ಏರಿಕೆಯಾಗಿರುವ ಬೆನ್ನಲ್ಲೇ ಸೋಮವಾರ ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್ನಲ್ಲಿ ಐದು ಎಚ್ಎಂಪಿವಿ ಪ್ರಕರಣಗಳು ದೃಢಪಟ್ಟಿವೆ.
.HMPV | ಉಸಿರಾಟದ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ: ರಾಜ್ಯಗಳಿಗೆ ಕೇಂದ್ರ.Explainer: HMPV ಎಂದರೇನು? ರೋಗಲಕ್ಷಣ, ತಡೆ, ಚಿಕಿತ್ಸೆ.. ಇಲ್ಲಿದೆ ಮಾಹಿತಿ.ಎಚ್ಎಂಪಿವಿ | ಭಯ ಬೇಕಿಲ್ಲ: ಆರೋಗ್ಯ ಇಲಾಖೆ .ಆಳ–ಅಗಲ | ಎಚ್ಎಂಪಿವಿ: ಸಾಮಾನ್ಯ ಸೋಂಕು ಅಪಾಯಕಾರಿ ಅಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.