ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಭೇಟಿಗಾಗಿ ನಾಳೆ ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಸಂಸ್ಥಾಪಕ ಬಿಮಲ್ ಗುರುಂಗ್ ಅವರು ಎನ್‌ಡಿಎಯಿಂದ ಹೊರಬಂದು, ತೃಣಮೂಲ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ. ಅವರೊಂದಿಗೆ ಅಮಿತ್ ಶಾ ಗುರುವಾರ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮತಗಳ ಮೇಲೆ ಕಣ್ಣಿಟ್ಟಿರುವುದರಿಂದ ಅವರಿಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗಬಹುದು ಎಂಬ ನಿರೀಕ್ಷೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.