ರಾಯ್ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಛತ್ತೀಸ್ಗಢದ ರಾಯ್ಪುರದಲ್ಲಿ ಮೊಯಿತ್ರಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಲ್ಲಿನ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
.ಕನ್ನಡಕ್ಕೆ ಅಗೌರವ ತೋರಿದವರನ್ನೇ ದಸರಾ ಉದ್ಘಾಟನೆಗೆ ಕರೆಯಬೇಕಿತ್ತಾ?: ಅಶೋಕ.ಇಸ್ರೇಲ್ ವೈಮಾನಿಕ ದಾಳಿ: ಯೆಮನ್ ಪ್ರಧಾನಿ, ಹಲವು ಸಚಿವರ ಹತ್ಯೆ.
ಮೊಯಿತ್ರಾ ಅವರ ಹೇಳಿಕೆಗಳು ಆಕ್ಷೇಪಾರ್ಹ ಮತ್ತು ಸಂವಿಧಾನಬಾಹಿರವಾಗಿವೆ ಎಂದು ದೂರುದಾರ ಗೋಪಾಲ್ ಸಮಂತೋ ಆರೋಪಿಸಿದ್ದಾರೆ.

'ಬಾಂಗ್ಲಾದೇಶದಿಂದ ನುಸುಳುವಿಕೆಯನ್ನು ತಡೆಯುವಲ್ಲಿ ಅಮಿತ್ ಶಾ ವಿಫಲರಾಗಿದ್ದು, ಅವರ ತಲೆಯನ್ನು ಕತ್ತರಿಸಿ ಮೇಜಿನ ಮೇಲೆ ಇಡಬೇಕು' ಎಂಬ ವಿವಾದಾತ್ಮಕ ಹೇಳಿಕೆಯನ್ನು ಮಹುವಾ ನೀಡಿದ್ದರು.

ಇದರ ಬೆನ್ನಲ್ಲೇ ಟಿಎಂಸಿ ನಾಯಕಿಯ ಹೇಳಿಕೆಯ ಸಂಬಂಧ ಬಿಜೆಪಿ ದೂರು ದಾಖಲಿಸಿತ್ತು.

ಪಶ್ಚಿಮ ಬಂಗಾಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೊಯಿತ್ರಾ, 'ಗಡಿಯ ಭದ್ರತೆಯಿಂದ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ' ಎಂದು ಆರೋಪಿಸಿದ್ದರು.
.ಏರ್ ಇಂಡಿಯಾ ವಿಮಾನದ ಎಂಜಿನ್ನಲ್ಲಿ ಬೆಂಕಿ: ತುರ್ತು ಭೂಸ್ಪರ್ಶ.ಶೀಘ್ರದಲ್ಲೇ ಮಣಿಪುರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ: ವರದಿ.BRICS ಸದಸ್ಯ ರಾಷ್ಟ್ರಗಳ ಮೇಲಿನ ನಿರ್ಬಂಧಕ್ಕೆ ರಷ್ಯಾ, ಚೀನಾ ವಿರೋಧ: ಪುಟಿನ್.ಶಾಂಘೈ ಶೃಂಗಸಭೆ: ದ್ವಿಪಕ್ಷೀಯ ಸಭೆ ನಡೆಸಿದ ಮೋದಿ–ಜಿನ್ಪಿಂಗ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.