ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್ ಶಾಗೆ ಇತಿಹಾಸದ ಬಗ್ಗೆ ತಿಳಿವಳಿಕೆ ಇಲ್ಲ, ತಿರುಚುತ್ತಲೇ ಇದ್ದಾರೆ: ರಾಹುಲ್

Published 12 ಡಿಸೆಂಬರ್ 2023, 9:42 IST
Last Updated 12 ಡಿಸೆಂಬರ್ 2023, 9:42 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ಟೀಕೆ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನಾಯಕನಿಗೆ ಇತಿಹಾಸದ ಬಗ್ಗೆ ತಿಳಿವಳಿಕೆ ಇಲ್ಲ, ಅದನ್ನು ತಿರುಚುತ್ತಲೇ ಇದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಂಡಿತ್ ನೆಹರೂ ಅವರು ನಮ್ಮ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ವರ್ಷಗಟ್ಟಲೇ ಜೈಲಿನಲ್ಲಿ ಇದ್ದರು. ಅಮಿತ್ ಶಾ ಅವರಿಗೆ ಇತಿಹಾಸ ಗೊತ್ತಿಲ್ಲ, ಅದನ್ನು ತಿರುಚುತ್ತಲೇ ಇದ್ದಾರೆ ಎಂದು ಆರೋಪಿಸಿದ್ದಾರೆ.

ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸಲಾಗುತ್ತಿದೆ. ಮೂಲ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬಿಜೆಪಿಗೆ ಆಸಕ್ತಿಯಿಲ್ಲ. ಜನರ ಹಕ್ಕಿಗಾಗಿ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಮಾಡಿದ ಪ್ರಮಾದಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಕಷ್ಟ ಅನುಭವಿಸಬೇಕಾಯಿತು ಎಂದು ಅಮಿತ್ ಶಾ, ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ದೂರಿದ್ದರು.

ನೆಹರೂ ಹೊಣೆಯಲ್ಲ: ಫಾರೂಕ್‌ ಅಬ್ದುಲ್ಲಾ

‘ಜಮ್ಮು–ಕಾಶ್ಮೀರ ಸಮಸ್ಯೆಗೆ ನೆಹರೂ ಕಾರಣರಲ್ಲ. ವಿಷಯ ಹೀಗಿದ್ದರೂ, ನೆಹರೂ ವಿರುದ್ಧ ಅವರಿಗೆ ಇಷ್ಟೊಂದು ದ್ವೇಷ ಯಾಕೆ ಎಂಬುದು ಅರ್ಥವಾಗುತ್ತಿಲ್ಲ’ ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಹಿರಿಯ ನಾಯಕ ಫಾರೂಕ್‌ ಅಬ್ದುಲ್ಲಾ ಮಂಗಳವಾರ ಹೇಳಿದ್ದಾರೆ.

ನೆಹರೂ ಕುರಿತು ರಾಜ್ಯಸಭೆಯಲ್ಲಿ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.

‘370ನೇ ವಿಧಿಯಡಿ ವಿಶೇಷ ಸ್ಥಾನಮಾನ ನೀಡಬೇಕು ಎಂಬ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ನೆಹರೂ ಅಮೆರಿಕದಲ್ಲಿದ್ದರು. ಈ ನಿರ್ಧಾರ ಕೈಗೊಂಡ ಸಭೆಯಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ್‌, ಶ್ಯಾಮಪ್ರಸಾದ್ ಮುಖರ್ಜಿ ಪಾಲ್ಗೊಂಡಿದ್ದರು’ ಎಂದು ಅಬ್ದುಲ್ಲಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT