ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಕಗ್ಗಂಟು

Published 6 ಮಾರ್ಚ್ 2024, 5:09 IST
Last Updated 6 ಮಾರ್ಚ್ 2024, 5:09 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ (ಶಿಂಧೆ ಬಣ) ಹಾಗೂ ಎನ್‌ಸಿಪಿ (ಅಜಿತ್‌ ಬಣ) ನಡುವಿನ ಸೀಟು ಹಂಚಿಕೆ ಮಾತುಕತೆ ಮಂಗಳವಾರ ತಡರಾತ್ರಿವರೆಗೆ ನಡೆದರೂ ಅಂತಿಮಗೊಂಡಿಲ್ಲ.

ಆದಾಗ್ಯೂ ಸೀಟು ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಕಗ್ಗಂಟಾಗಿದೆ.

ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರೊಂದಿಗೆ ಮೊದಲ ಸುತ್ತಿನಲ್ಲಿ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವಿಸ್‌ ಹಾಗೂ ಅಜಿತ್‌ ಪವಾರ್‌ ಚರ್ಚೆ ನಡೆಸಿದರು. ಇದಾದ ಬಳಿಕ ಎರಡನೇ ಸುತ್ತಿನಲ್ಲಿ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರೊಂದಿಗೆ ಅಮಿತ್‌ ಶಾ ಮಾತುಕತೆ ನಡೆಸಿದರು.

ಈ ನಡುವೆ ಸೀಟು ಹಂಚಿಕೆ ಸಂಬಂಧ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ. ಬುಧವಾರವೂ ಮಾತುಕತೆ ಮುಂದುವರಿಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. 

ಅಮಿತ್‌ ಶಾ ಅವರು ಶಿವಸೇನೆ, ಎನ್‌ಸಿಪಿ ಮುಂದಿಟ್ಟಿರುವ ಸೂತ್ರವನ್ನು ಶಿಂಧೆ ಮತ್ತು ಅಜಿತ್‌ ಪವಾರ್‌ ಒಪ್ಪಿಲ್ಲ, ನಮ್ಮಗೆ ಮತ್ತಷ್ಟು ಸೀಟುಗಳು ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ಶಿವಸೇನೆ ಮೂಲಗಳು ತಿಳಿಸಿವೆ.

ಬಲ್ಲಮೂಲಗಳ ಪ್ರಕಾರ 48 ಲೋಕಸಭೆ ಕ್ಷೇತ್ರಗಳ ಪೈಕಿ, ಬಿಜೆಪಿ 30, ಶಿವಸೇನೆ 12, ಎನ್‌ಸಿಪಿ 6 ಸ್ಥಾನಗಳಲ್ಲಿ ಸ್ಫರ್ಧಿಸುವ ಸೂತ್ರವನ್ನು ಅಮಿತ್‌ ಶಾ ಅವರು ಶಿವಸೇನೆ, ಎನ್‌ಸಿಪಿ ಮುಂದಿಟ್ಟಿದ್ದಾರೆ. ಆದರೆ ಶಿವಸೇನೆ 18, ಎನ್‌ಸಿ‍ಪಿ 10 ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿವೆ. ಇತ್ತ ಇಷ್ಟೂ ಸ್ಥಾನಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಡಲು ಬಿಜೆಪಿ ತಯಾರಿಲ್ಲ ಎಂದು ಪಡಣವೀಸ್‌ ಆಪ್ತರು ಹೇಳಿದ್ದಾರೆ.

ಇಂದು ಮತ್ತೆ ಸರಣಿ ಸಭೆಗಳನ್ನು ನಡೆಸಿ ಸೀಟು ಹಂಚಿಕೆ ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT